ಬಳ್ಳಾರಿ,ಜು.22 ಮಕ್ಕಳು ನಿರಂತರವಾಗಿ ಶಾಲೆಗೆ ಬರಬೇಕು. ತಮ್ಮ ಸಹಪಾಠಿಗಳನ್ನು ಸಹ ಶಾಲೆಗೆ ಕರೆದುಕೊಂಡು ಬರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.
ಅವರು, ಸೋಮವಾರದಂದು ಜಿಲ್ಲಾ ಮಟ್ಟದ ಕಾಣೆಯಾದ ಮಕ್ಕಳ ಪತ್ತೆಯ ಕಾರ್ಯಪಡೆ ತಂಡದ ಜೊತೆಗೂಡಿ ಬಳ್ಳಾರಿ ತಾಲ್ಲೂಕಿನ ಕೊರ‍್ಲಗುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಮಕ್ಕಳ ರಕ್ಷಣೆ, ಬಾಲ್ಯವಿವಾಹ ತಡೆ ಮತ್ತು ಪೋಕ್ಸೋ ಕಾಯ್ದೆ’ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜ್ಯನ್ಯ ಮತ್ತು ಮಾನಸಿಕ-ದೈಹಿಕ ಹಿಂಸೆ ನಡೆಯುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಕಂಡುಬರುತ್ತಿವೆ. ಹಾಗಾಗಿ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು. ಪ್ರತಿದಿನ ಶಾಲೆಗೆ ಬರಬೇಕು. ಪೋಷಕರು ಸಹ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಈ ಕುರಿತು ಶಿಕ್ಷಕರು ನಿಗಾವಹಿಸಬೇಕು ಎಂದು ತಿಳಿಸಿದರು.
ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಚಂದ್ರಕಾAತ್ ನಂದಾರೆಡ್ಡಿ ಅವರು ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಮಕ್ಕಳು ನಾಪತ್ತೆ, ಬಾಲಕಾರ್ಮಿಕಗಳಂತ ಪ್ರಕರಣಗಳು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗುತ್ತಿದ್ದು, ಮಕ್ಕಳು ಇಂತಹ ಸಂದರ್ಭದಲ್ಲಿ ಪೊಲೀಸ್ ತುರ್ತು ಸಹಾಯವಾಣಿ 112 ಹಾಗೂ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸುವ ಮೂಲಕ ಸಹಾಯ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಮಾತನಾಡಿ, ನಿಮ್ಮ ಸುತ್ತ-ಮುತ್ತ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ, ಬಾಲಕಾರ್ಮಿಕ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಕಂಡು ಬಂದರೆ ತಕ್ಷಣ ಮಕ್ಕಳ ಸಹಾಯವಾಣಿ 1098/112 ಕರೆ ಮಾಡಿ ತಿಳಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ಮಾತನಾಡಿ, ನಿರಂತರ ಗೈರು ಹಾಜರಾದ ಮಕ್ಕಳ ಮನೆ ಭೇಟಿ ನೀಡಿ ಪೋಷಕರ ಮನವೊಲಿಸಿ ಪುನಃ ಶಾಲೆಗೆ ಕರೆದುಕೊಂಡು ಬರಲು ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಂತರ ತಂಡದ ಸದಸ್ಯರು ಕೊರ‍್ಲಗುಂದಿ ಗ್ರಾಮ ಪಂಚಾಯತ್‌ಗೆ ಆಕಸ್ಮಿಕ ಭೇಟಿ ನೀಡಿ ಮಕ್ಕಳಿಗೆ ಸಂಬAಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಮಹಿಳೆಯರ ಮತ್ತು ಮಕ್ಕಳು ಕಾವಲು ಸಮಿತಿಯ ಸಭೆಯನ್ನು ಪ್ರತಿ ತ್ರೆöÊಮಾಸಿಕಕ್ಕೊಮ್ಮೆ ನಡೆಸಿ ಸಭೆಯ ನಡವಳಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲು ಸೂಚಿಸಿದರು. ಇದೇ ವೇಳೆ ಮಕ್ಕಳ ವಿಶೇಷ ಗ್ರಾಮಸಭೆ ಹಮ್ಮಿಕೊಂಡು ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲೆಗೆ ದೀರ್ಘ ಗೈರುಹಾಜರಾದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಮಾಹಿತಿ ಪಡೆಯಲಾಯಿತು. ಈ ಕುರಿತು ಮಕ್ಕಳ ಮನೆಭೇಟಿ ನೀಡಿ ಪೋಷಕರ ಮನವೊಲಿಸಿ ಪುನಃ ಶಾಲೆಗೆ ಕರೆತರಲು ಶಾಲಾ ಶಿಕ್ಷಣ ಇಲಾಖೆಯ ಉಪ-ನಿರ್ದೇಶಕರಿಗೆ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸೂಚನೆ ನೀಡಿದರು. ಈ ಕುರಿತು ಕ್ರಮ ಕೈಗೊಂಡ ವರದಿಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ತಿಳಿಸಿದರು.
ನಂತರ ಶಾಲೆಯಲ್ಲಿದ್ದ ದೂರು ಪೆಟ್ಟಿಗೆಯನ್ನು ತೆರೆಯಲಾಗಿ ಅದರಲ್ಲಿ 3 ದೂರುಗಳು ಕಂಡುಬAದಿದ್ದು, ಶಾಲೆಗೆ ಸಂಬAಧಿಸಿದ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಖಾಯಂ ಶಿಕ್ಷಕರ ನೇಮಕ ಮಾಡಲು ದೂರಿನಲ್ಲಿ ಕೋರಲಾಗಿತ್ತು. ಅದರನ್ವಯ ಈ ಕುರಿತು ಸಂಬAಧಿಸಿದ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.
ಬಳಿಕ ಕೊರ‍್ಲಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಕರ್ಯ, ಒದಗಿಸುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡರು ಮತ್ತು ಕಿಶೋರಿಯರಿಗೆ ವೈಯಕ್ತಿಕ ಶುಚಿತ್ವ ಕುರಿತು ಅರಿವು ಮೂಡಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಮೋಕ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಾಳಿಂಗ, ಜಿಲ್ಲಾ ಬಾಲನ್ಯಾಯ ಮಂಡಳಿಯ ಸದಸ್ಯೆ ಪುಷ್ಪಲತಾ, ರೀಡ್ಸ್ ಸಂಸ್ಥೆಯ ನಿರ್ದೇಶಕ ತಿಪ್ಪೇಸ್ವಾಮಿ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ವೇದಾವತಿ, ರವಿಚಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಸಿ.ಈಶ್ವರ ರಾವ್, ಚನ್ನಬಸಪ್ಪ ಪಾಟೀಲ್, ಸುಧಾ, ಪಿಎಚ್‌ಸಿ ವೈದ್ಯಾಧಿಕಾರಿ ನೋಶಿನ್, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಲಲಿತಮ್ಮ, ಶಾಲೆಯ ಮುಖ್ಯಗುರುಗಳಾದ ಭಾರತಿ, ರಮೇಶ್ ಮತ್ತು ಸಹಶಿಕ್ಷಕರು, ಸ್ವಯಂಸೇವಾ ಸಂಸ್ಥೆಗಳ ಸಿಬ್ಬಂದಿಗಳಾದ ಶಿಲ್ಪಾ, ಲಕ್ಷಿö್ಮÃ, ಬಸಮ್ಮ ಸೇರಿದಂತೆ ಗ್ರಾಮ ಪಂಚಾಯತ್ ಸಿಬ್ಬಂದಿ, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಹಾಗೂ ಇನ್ನೀತರರು ಉಪಸ್ಥಿತರಿದ್ದರು