ಮೆದುಳಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ಡಾ.ಬಸರೆಡ್ಡಿ .ಎನ್

Ravi Talawar
ಮೆದುಳಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ಡಾ.ಬಸರೆಡ್ಡಿ .ಎನ್
WhatsApp Group Join Now
Telegram Group Join Now


ಬಳ್ಳಾರಿ,ಜು.29: ಮಾನವನ ದೇಹದ ಪ್ರಮುಖ ಅಂಗ ಮೆದುಳಾಗಿದೆ. ಎಲ್ಲರೂ ಮೆದುಳಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಎನ್.ಬಸರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಮುಂಭಾಗದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ “ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ” ಎಂಬ ಘೋಷವಾಕ್ಯದಡಿ “ವಿಶ್ವ ಮೆದುಳು ದಿನಾಚರಣೆ-2025” ಕಾರ್ಯಕ್ರಮದಲ್ಲಿ ಭಾಗವಹಿಸಿ  ಮಾತನಾಡಿದರು.

ಮೆದುಳು ದೇಹದ ಅತ್ಯಂತ ಪ್ರಮುಖ ಅಂಗವಾಗಿದೆ. ಮೆದುಳು ಕಾರ್ಯ ನಿರ್ವಹಿಸದಿದ್ದಲ್ಲಿ ಮನುಷ್ಯರು ಪರಾವಲಂಬಿಯಾಗಿ ಬೇರೆಯವರಿಗೆ ಹೊರೆಯಾಗಬೆೆÃಕಾಗುತ್ತದೆ ಎಂದರು.
ನರರೋಗ ಸಂಬAಧಿಸಿದ ಆರೋಗ್ಯ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ. ತಲೆನೋವು, ಪಾಶ್ರ‍್ವವಾಯು, ಮೂರ್ಛೆರೋಗ, ಪಾರ್ಕಿನ್ ಸನ್ ಕಾಯಿಲೆ ಮತ್ತು ಮರೆವಿನ ಕಾಯಿಲೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರಿಗೆ ಬಳಿ ತಪಾಸಣೆ ಒಳಪಟ್ಟು ಉಚಿತ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಮೆದುಳು ಆರೋಗ್ಯ ಕಾರ್ಯಕ್ರಮದಡಿ 2024ರಿಂದ ಜೂನ್ 2025ನೇ ಸಾಲಿನವರೆಗೂ 19,000 ಫಲಾನುಭವಿಗಳು ಮೆದುಳು ಆರೋಗ್ಯ ಚಿಕಿತ್ಸಾಲಯದಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ವಿವರಿಸಿದರು. ಮೆದುಳಿನ ಆರೋಗ್ಯ ಚಿಕಿತ್ಸೆ ನೀಡುವಲ್ಲಿ ಬೇರೆ ಜಿಲ್ಲೆಗಳಿಗಿಂತ ನಮ್ಮ ಬಳ್ಳಾರಿ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಮೆದುಳು ಆರೋಗ್ಯ ಕಾರ್ಯಕ್ರಮದಡಿ ಮೆದುಳು ಮತ್ತು ನರ ಸಂಬAಧಿತ ರೋಗಿಗಳಿಗೆ ನಿತ್ಯ ಚಿಕಿತ್ಸೆ ಒದಗಿಸಿ ಔಷಧಗಳನ್ನು ನೀಡಲಾಗುತ್ತಿದೆ. ಮೆದುಳನ್ನು ಆರೋಗ್ಯವಾಗಿಡಲು ಸರಳ ದೈನಂದಿನ ಅಭ್ಯಾಸ ಜತೆಯಲ್ಲಿಯೇ ಜೀವನ ಶೈಲಿ ಆಯ್ಕೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ನಿತ್ಯ ಒತ್ತಡದ ಕೆಲಸದ ನಡುವೆಯೂ ಎಂಟು ತಾಸು ನಿದ್ದೆ ಮಾಡಬೇಕು. ಮಾನಸಿಕ ಸಧೃಡಗೊಳ್ಳಲು ಒತ್ತಡ ನಿಯಂತ್ರಿಸಿ ಧೂಮಪಾನ ಮತ್ತು ಮದ್ಯಪಾನ ತ್ಯಜ್ಯಿಸಬೇಕು ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಮೆದುಳು ಆರೋಗ್ಯವಾಗಿರಲು ನಮ್ಮ ದೇಹವು ದೈಹಿಕ ಮತ್ತು ಮಾನಸಿಕ ಸಧೃಡವಾಗಿರಬೇಕು. ಮೆದುಳಿನ ಆರೋಗ್ಯದ ಬಗ್ಗೆ ನಿರ್ಲಕ್ಷö್ಯ ವಹಿಸಿದೆ ಕಾಳಜಿ ವಹಿಸಬೇಕು. ಮೆದುಳಿನ ಆರೋಗ್ಯದ ಜವಾಬ್ದಾರಿಯ ಬಗ್ಗೆ ಎಲ್ಲಾ ಸರಕಾರಿ ಸಂಸ್ಥೆಗಳು ಆರೋಗ್ಯ ವೃತ್ತಿಪರರು, ಆರೈಕೆದಾರರು, ನಾಗರಿಕರು ಎಲ್ಲರೂ ಸೇರಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮೆದುಳು ದಿನವನ್ನು ಆಚರಿಸಲಾಗುತ್ತದೆ ಎಂದರು.
ಇದಕ್ಕೂ ಮುನ್ನ ಗಣ್ಯರೆಲ್ಲರೂ ಸೇರಿ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮೆದುಳು ಆರೋಗ್ಯ ಚಿಕಿತ್ಸಾ ಕೇಂದ್ರದಿAದ ಆಯೋಜಿಸಿದ್ದ “ಮೆದುಳು ಚುರುಕುಗೊಳಿಸುವ ಚಟುವಟಿಕೆ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಶ್ವನಾಥ್.ಕೆ., ಜಿಲ್ಲಾ ಆಸ್ಪತ್ರೆಯ ವಿಭಾಗೀಯ ಮುಖ್ಯಸ್ಥರು ಹಾಗೂ ತಜ್ಞ ವೈದ್ಯ ಡಾ.ಶ್ರೀಧರ್ ಎಮ್.ಆರ್., ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನೋಡಲ್ ಅಧಿಕಾರಿ ಹಾಗೂ ತಜ್ಞ ವೈದ್ಯ ಡಾ.ರಾಕೇಶ್, ಜಿಲ್ಲಾ ಆಸ್ಪತ್ರೆಯ ಆಡಳಿತ ಸಹಾಯಕ ಅಧಿಕಾರಿಗಳಾದ ದುರುಗಪ್ಪ.ಟಿ., ರಜೀಯಾ ಬೇಗಂ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಸಣ್ಣಕೇಶವ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸೇರಿದಂತೆ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಸಿಬ್ಬಂದಿ ವರ್ಗ, ವೈದ್ಯಕೀಯ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article