ತುಮಕೂರು, ಆಗಸ್ಟ್ 04: ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಮಾರಣಹೋಮ ನಡೆದಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇತ್ತ ನಗರದಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿವೆ. ಸದ್ಯ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುವುದು ತಿಳಿಯಲಿದೆ.
ಇನ್ನು ನವಿಲುಗಳ ಸಾವಿಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಅಥವಾ ಯಾರಾದರೂ ಏನಾದರೂ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.