ಬಳ್ಳಾರಿ,ಆ.04: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಕಚೇರಿ ಅಧೀಕ್ಷಕ ರವಿಕುಮಾರ್ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಇತ್ತೀಚೆಗೆ ಬೀಳ್ಕೊಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಜಿಲ್ಲಾ ಐಇಸಿ ವಿಭಾಗದ ಮುಖ್ಯಸ್ಥರಾಗಿ ಈಶ್ವರ್ ದಾಸಪ್ಪನವರು ಅತ್ಯುತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಎಲ್ಲರ ಜೊತೆಯಲ್ಲಿ ಹೊಂದಿಕೊAಡು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದಾರೆ. ಅರುಣ್ ಕುಮಾರ್ ಅವರು ಸಹ ಆರೋಗ್ಯ ಇಲಾಖೆಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಹಾಗೂ ರವಿಚಂದ್ರ ಅವರು ಸಹ ಅಚ್ಚುಕಟ್ಟಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ ಎಂದು ಅವರ ಅನಿಸಿಕೆ ವ್ಯಕ್ತಪಡಿಸಿದರು.
ಇದೇ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಹಾಯಕ ಆಡಳಿತ ಅಧಿಕಾರಿಯಾಗಿ ನೇಮಕಗೊಂಡ ನವೀನ್ ಕುಮಾರ್ ಅವರಿಗೆ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದರು.
ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಬಿಳ್ಕೋಡುಗೆ
