ಬಳ್ಳಾರಿ,ಆ.06 ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುತ್ತಿರುವುದು ವಿಷಾಧಕರ ಸಂಗತಿಯಾಗಿದ್ದು, ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂಟೋನ್ಮೆAಟ್ ಪ್ರದೇಶದ ಗಾಲೀಬ್ ಪ್ರೌಢಶಾಲೆ(ಅನುದಾನಿತ)ಯಲ್ಲಿ ಮಂಗಳವಾರ ಆಯೋಜಿಸಿದ್ದ “ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಡ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ, ಬಾಲ್ಯವಿವಾಹಗಳನ್ನು ನೆರವೇರಿಸುತ್ತಿರುವ ವ್ಯಕ್ತಿಗಳಾದ ಪುರೋಹಿತರು, ಮೌಲಿಗಳು, ಚರ್ಚ್ ಪಾದ್ರಿಗಳು ಮತ್ತು ದೇವಸ್ಥಾನದ ಪೂಜಾರಿಗಳು, ಲಗ್ನ ಪತ್ರಿಕೆ ಮುದ್ರಣ ಮಾಡುವ ಪ್ರಿಟಿಂಗ್ ಪ್ರೆಸ್, ವಾದ್ಯವೃಂದದವರು, ಶಾಮಿಯಾನ ಸಪ್ಲೆöÊಯರ್, ಪೋಟೋಗ್ರಾಫರ್-ವಿಡಿಯೋಗ್ರಾಫರ್ ಸೇರಿದಂತೆ ಭಾಗಿಯಾದ ಇನ್ನಿತರೆ ವ್ಯಕ್ತಿಗಳ ಮೇಲೆ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಮಕ್ಕಳ ರಕ್ಷಣಾ ಘಟಕದ ನಿಲೋಫಿಯಾ ಅವರು ಮಾತನಾಡಿ, ಮಕ್ಕಳಿಗೆ ಬಾಲ್ಯವಿವಾಹದ ಬಗ್ಗೆ ಜಾಗೃತಿ ಮೂಡಿಸುತ್ತಾ ಬಾಲ್ಯವಿವಾಹಕ್ಕೆ ಒಳಪಟ್ಟ ಬಾಲಕಿಯರು ಅನುಭವಿಸುವ ಕಷ್ಟ, ಪೋಷಕರ ಮೇಲೆ ಕೈಗೊಳ್ಳಬಹುದಾದ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯು ಬಾಲ್ಯವಿವಾಹ ನಡೆದ ನಂತರ ಬಾಲಗರ್ಭಿಣಿಯ ಪ್ರಕರಣಗಳಲ್ಲಿ ಅನ್ವಯ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹೇಗೆ ಸಹಕಾರಿಯಾಗುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.
ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಸುಶೀಲ, ಮಕ್ಕಳ ಸಹಾಯವಾಣಿ ಸಂಖ್ಯೆ-1098 ನ ಕಾರ್ಯವೈಖರಿ, ಸೇವೆಗಳು, ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಕುರಿತು ಮಾಹಿತಿ ನೀಡಿದರು.ಸಿಆರ್ಪಿ ಶಾಹನವಾಜ್ ಅವರು ಮಾತನಾಡಿ, ಎಲ್ಲಾ ಮಕ್ಕಳು ಬಾಲ್ಯವಿವಾಹ ತಡೆಗೆ ಮುಂದಾಗಬೇಕು. ತಮ್ಮ ತಮ್ಮ ಪೋಷಕರಿಗೆ ಈ ಕುರಿತು ಅರಿವು ಮೂಡಿಸಬೇಕು. ಯಾವುದೇ ಭಯಪಡದೇ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಇಲ್ಲವೇ ಪೊಲೀಸ್ ಸೇವೆ-112 ಗೆ ಮಾಹಿತಿ ನೀಡುವ ಮೂಲಕ ನಮ್ಮ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತಗೊಳಿಸಬೇಕು ಎಂದು ಕರೆ ನೀಡಿದರು.
ಪೊಲೀಸ್ ಇಲಾಖೆಯ ನವದುರ್ಗಿ ತಂಡದ ಪವಿತ್ರ ಅವರು ಮಾತನಾಡಿ, ಸೈಬರ್ ಕ್ರೆöÊಮ್ ಮತ್ತು ಅಂತರ್ಜಾಲ ಸುರಕ್ಷತೆ ಕುರಿತು ತಿಳಿಸಿ, ಮಕ್ಕಳು ಮತ್ತು ಮಹಿಳೆಯರಿಗೆ ರಕ್ಷಣೆಯ ಅವಶ್ಯಕತೆಯಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ-112 ಗೆ ಕರೆ ಮಾಡಲು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ನಜೀರ್ ಸೇರಿದಂತೆ ಶಾಲೆಯ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.