ವಿಧಾನಸಭಾ ಅಧಿವೇಶನದ ಮೊದಲ ದಿನವೇ ಒಳಮಿಸಲಾತಿ ಘೋಷಿಸಬೇಕು.

Pratibha Boi
ವಿಧಾನಸಭಾ ಅಧಿವೇಶನದ ಮೊದಲ ದಿನವೇ ಒಳಮಿಸಲಾತಿ ಘೋಷಿಸಬೇಕು.
WhatsApp Group Join Now
Telegram Group Join Now
ಧಾರವಾಡ: ರಾಜ್ಯ ಸರ್ಕಾರ ಮಾದಿಗ ಡೋಹರ ಕಕ್ಕಯ್ಯ ಮತ್ತು ಸಂಬಂಧಿತ ಜಾತಿಗಳಿಗೆ ಪ್ರತ್ಯೇಕ ಶೇ.6 ರ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು. ಇಲ್ಲವಾದರೆ ಮತ್ತೆ ಮಾದಿಗ ಡೋಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು
ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜ ಸಂಘದ ಅಧ್ಯಕ್ಷ ಸಂತೋಷ ಸವಣೂರ ಎಚ್ಚರಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾದಿಗ ಡೋಹರ ಕಕ್ಕಯ್ಯಾ ಸಮಾಜ ಹಾಗೂ ಸಂಬಂಧಿತ ಜಾತಿಗಳು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಸ್ವಾಗತಿಸುತ್ತೇವೆ.
ಆಗಸ್ಟ್ 1 ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಕಳೆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಾಕ್ರೋಶ ಪ್ರತಿಭಟನೆಗಳು ದೊಡ್ಡಮಟ್ಟದಲ್ಲಿ ನೆಡೆದಿದ್ದವು. ಈ ಪ್ರತಿಭಟನೆಯಿಂದ ಈಗ ಸರ್ಕಾರ ಎಚ್ಚೆತ್ತಿದೆ. ಆದರೆ ಕೆಲವರು ಸರ್ಕಾರವನ್ನು ಹಿಂದಕ್ಕೆ ಎಳೆಯುತ್ತಿದ್ದಾರೆ.
ನ್ಯಾ ನಾಗಮೋಹನ್ ದಾಸ್ ಅವರ ವರದಿಯನ್ನು ಕರ್ನಾಟಕ ಸರ್ಕಾರ ಸ್ವೀಕರಿಸಿದೆ. ಆದರೆ ವರದಿಯ ಶಿಫಾರಸ್ಸನ್ನು ಜಾರಿ ಮಾಡಲು ಮುಂದಾಗಿಲ್ಲ. ಸರ್ಕಾರದ ಈ  ವಿಳಂಬ ನೀತಿ ಕಾಣಿಸುತ್ತದೆ.
ಸಿದ್ದರಾಮಯ್ಯನವರು ಅಹಿಂದ ನಾಯಕರು ಎಂದು ಸಾಬೀತುಪಡಿಸಲು ಇದೊಂದು ಸುವರ್ಣ ಅವಕಾಶ.  ನಾಗಮೋಹನ್ ದಾಸ್ ಅವರ ಶಿಫಾರಸ್ಸಿನ ಅನ್ವಯ ಒಳ ಮೀಸಲಾತಿ ಜಾರಿ ಮಾಡುವ ತೀರ್ಮಾನವನ್ನು ಘೋಷಿಸಬೇಕಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ.
ನ್ಯಾ ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ, ಈಗ ನ್ಯಾ ನಾಗಮೋಹನ ದಾಸ್ ಆಯೋಗ ಎಲ್ಲ ಮೂರೂ ಆಯೋಗಗಳು ಕರ್ನಾಟಕದಲ್ಲಿ ಮಾದಿಗ ಡೊಹರ ಕಕ್ಕಯ್ಯ ಮತ್ತು ಅದರ ಉಪಜಾತಿಗಳೆ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ಪಷ್ಟವಾಗಿ ಹೇಳಿವೆ. ಎಲ್ಲಾ ಆಯೋಗಗಳು ಮಾದಿಗೆ ಡೊಹರ ಕಕ್ಕಯ್ಯ ಉಪ ಜಾತಿಗಳ ಗುಂಪಿಗೆ ಶೇ.6 ಮೀಸಲಾತಿಯನ್ನು ನಿಗದಿಪಡಿಸಿವೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಮಾದಿಗ ಡೊಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳ ಪಾಲಿನ ಶೇ.೬ ಮೀಸಲಾತಿಯನ್ನು ಪ್ರತ್ಯೇಕಿಸಿ ಘೋಷಿಸಲಿ. ಉಳಿದ ಹಂಚಿಕೆಯನ್ನು ನಿಧಾನವಾಗಿ ಮಾಡಲಿ ಎಂದು ಆಗ್ರಹಿಸುತ್ತೆವೆ. ಈ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು. ಇಲ್ಲವಾದರೆ ಮತ್ತೆ ಮಾದಿಗ ಡೋಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದರು.
ರಾಜ್ಯ ಉಪಾಧ್ಯಕ್ಷ ಗುರು ಪೋಳ, ಮಹಿಳಾ ಘಟಕದ ಅಧ್ಯಕ್ಷೆ ಸಾರಿಕಾ ಸವಣೂರ,ಸಮಾಜದ ಮುಖಂಡರಾದ
ಲಕ್ಷ್ಮಣ ಪೋಳ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
WhatsApp Group Join Now
Telegram Group Join Now
Share This Article