ಬೆಂಗಳೂರು, ಆಗಸ್ಟ್ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಆ ಮೂಲಕ ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜ್ಯಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.