ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ

Hasiru Kranti
ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ
WhatsApp Group Join Now
Telegram Group Join Now

ಬೆಳಗಾವಿ : ಭಾರತೀಯ ಹವಾಮಾನ ಇಲಾಖೆಯು ಮುಂದಿನ ೫ ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ.
ಮುಂದಿನ ೫ ದಿನಗಳಲ್ಲಿ ಉತ್ತರ ಕರ್ನಾಟಕದ ಬಹಳಷ್ಟು ಸ್ಥಾನಗಳಲ್ಲಿ ತಾಪಮಾನವು ೨ ರಿಂದ ೩ ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಜನರು ಹಗಲು ಸಮಯದಲ್ಲಿ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಜನರು ಮನೆಯಿಂದ ಹೊರಗೆ ಹೋದಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ತಮ್ಮೊಂದಿಗೆ ಒಯ್ಯುವಂತೆ ಹವಾಮಾನ ಇಲಾಖೆ ಅಧಿಕಾರಿಗಳು ಸಲಗೆ ನೀಡಿದ್ದಾರೆ.

https://twitter.com/Indiametdept/status/1773273435554083091/photo/1

ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ೨ ರಿಂದ ೩ ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ ಖಿಓIಇಗೆ ತಿಳಿಸಿದ್ದಾರೆ. Iಒಆ ವರದಿ ಪ್ರಕಾರ, ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು ೩.೧- ೫ ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ ೧.೬- ೬ ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ತಾಪಮಾನವು ಮಾರ್ಚ್‌ಗಿಂತ ಹೆಚ್ಚಾಗಿರುತ್ತದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ತಾಪಮಾನದಲ್ಲಿ ಗರಿಷ್ಠ ಏರಿಕೆಯಾಗಲಿದೆ. ಉತ್ತರ ಕರ್ನಾಟಕದ ಕೆಲವು ಸ್ಥಳಗಳ್ಲಿ ಅದು ೪ ರಿಂದ ೫ ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ತಾಪಮಾನವು ೧೨ ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಗರಿಷ್ಠ ೩೫.೨ ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆಕಾಶವು ಶುಭ್ರವಾಗಿದ್ದು ಬೇಸಿಗೆಯ ಬಿಸಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಾಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ ರಾಜ್ಯದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article