ಬಳ್ಳಾರಿ,ಆ.15. ಕೇಂದ್ರ ಸಂವಹನ ಇಲಾಖೆ ಬಳ್ಳಾರಿ ಹಾಗೂ ಶ್ರೀ ಗುರು ತಿಪ್ಪೇರುದ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಶುಕ್ರವಾರ 79ನೇಸ್ವಾತಂತ್ರ್ಯೋತ್ಸವ ದಿನ ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಮಂಜುಳಾ ರಾಷ್ಟç ಧ್ವಜಾರೋಹಣಾ ನೆರವೇರಿಸಿದರು.
ವಿದ್ಯಾಸಂಸ್ಥೆಯ ಕಾರ್ಯದರ್ಶಿ ನಾಗರಾಜ ಅವರು ಮಾತನಾಡಿ ಹಲವಾರು ಗಣ್ಯರ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರö್ಯ ದೊರಕಿದೆ. ಹಾಗಾಗಿ ಅವರನ್ನು ತಪ್ಪದೇ ಸ್ಮರಿಸಬೇಕು ಎಂದು ಹೇಳಿದರು.
ಕೇಂದ್ರ ಸಂವಹನ ಇಲಾಖೆಯ ಎನ್.ರಾಮಕೃಷ್ಣ ಅವರು ಮಾತನಾಡಿ, ಕೇಂದ್ರ ಸಂವಹನ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, 79ನೇ ಸ್ವಾತಂತ್ರö್ಯ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ, ದೇಶ ಭಕ್ತಿಗೀತೆಗಳ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಿರುಗುಪ್ಪದ ನೇತ್ರಕಲಾ ಸಂಘ ತಂಡದಿAದ ದೇಶಭಕ್ತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಗುರು ತಿಪ್ಪೇರುದ್ರ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೀನಾ ರೆಡ್ಡಿ, ಪದವಿಪೂರ್ವ ಪ್ರಾಂಶುಪಾಲರಾದ ಶಾರದಾ.ಬಿ., ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಇಲಿಯಾಸ್, ಉಪನ್ಯಾಸಕ ಕೃಷ್ಣಪ್ಪ, ಪದ್ಮಾವತಿ ಮುಂತಾದವರು ಉಪಸ್ಥಿತರಿದ್ದರು.