ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ

Ravi Talawar
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ
WhatsApp Group Join Now
Telegram Group Join Now

ಉಡುಪಿ, ಆಗಸ್ಟ್​ 16: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ  ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.

ಇಂದು ಚಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರಧಾನ ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಬಂದ ಭಕ್ತರು ಶ್ರೀ ಕೃಷ್ಣ ದರ್ಶನ ಮಾಡಿದರು. ಆದರೆ ರಥಬೀದಿ ತುಂಬ ಕಾಣುವ ಬಾಲಕೃಷ್ಣ, ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುತ್ತೆ.
WhatsApp Group Join Now
Telegram Group Join Now
Share This Article