Pratibha Boi
WhatsApp Group Join Now
Telegram Group Join Now

ಇಂಡಿ,ಆ.೧೮: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ನೀರಿಕ್ಷಕ ಪರಮಾನಂದ ಹೂಗಾರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ೭೫,೧೧೦ ಮೌಲ್ಯದ ೨೫೯೦ ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ಪಟ್ಟಣದ ಕುಂಬಾರ ಓಣಿಯ ಹತ್ತಿರದ ರಸ್ತೆಯಲ್ಲಿ ನಡೆದಿದೆ.
ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಆರೋಪಿ ಪರಾರಿಯಾಗಿದ್ದು ೭೫,೧೧೦ ಮೌಲ್ಯದ ೨೫೯೦ ಕೆಜಿ ಅಕ್ಕಿ ಹಾಗೂ ಅಂದಾಜು ೩ ಲಕ್ಷ ಮೌಲ್ಯದ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article