ಐದು ವರ್ಷಗಳಲ್ಲಿ 75 ವ್ಯಾಘ್ರಗಳ ಸಾವು; ಕರ್ನಾಟಕದಲ್ಲಿ ಹುಲಿ ಸಂತತಿಗೆ ಅಪಾಯ

Ravi Talawar
ಐದು ವರ್ಷಗಳಲ್ಲಿ 75 ವ್ಯಾಘ್ರಗಳ ಸಾವು; ಕರ್ನಾಟಕದಲ್ಲಿ ಹುಲಿ ಸಂತತಿಗೆ ಅಪಾಯ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​ 19: ಕರ್ನಾಟಕದಲ್ಲಿ ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಹುಲಿ ಸಂರಕ್ಷಿತ ಪ್ರದೇಶವಾಗಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ (2020 ರಿಂದ 2025) ರ ನಡುವೆ 75 ಹುಲಿಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.

ಈ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಮಾತನಾಡಿ, 75 ರಲ್ಲಿ 62 ಹುಲಿಗಳು ನೈಸರ್ಗಿಕವಾಗಿ ಮೃತಪಟ್ಟಿವೆ. ಅಂದರೆ, ವಯೋಸಹಜ ಕಾಯಿಲೆ, ಹುಲಿಗಳ ನಡುವಿನ ಸಂಘರ್ಷ ಮತ್ತು ರೋಗಗಳಿಗೆ ತುತ್ತಾಗಿವೆ ಮೃತಪಟ್ಟಿವೆ ಎಂದು ಹೇಳಿದರು. ಇನ್ನುಳಿದ 13 ಹುಲಿಗಳು ಅಸ್ವಾಭಾವಿಕವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
Share This Article