ಅಖಿಲಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ: ಪದಾಧಿಕಾರಿಗಳ ಆಯ್ಕೆ

Ravi Talawar
ಅಖಿಲಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ: ಪದಾಧಿಕಾರಿಗಳ ಆಯ್ಕೆ
WhatsApp Group Join Now
Telegram Group Join Now

ಬೆಳಗಾವಿ: ಅಖಿಲಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಜಿಲ್ಲಾ ಘಟಕ ಬೆಳಗಾವಿಯ ಅಧ್ಯಕ್ಷರಾಗಿದ್ದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ರಾಷ್ಟ್ರೀಯ ಉಪಾಧ್ಯಕ್ಷರಾಗಿರುವ ನಿಮಿತ್ತ ತೆರುವಾದ ಸ್ಥಾನಕ್ಕೆ ಸವದತ್ತಿ ಮೂಲಿಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಮುತ್ನಾಳದ ಶಿವಾನಂದ ಶಿವಾಚಾರ್ಯರು, ಬಾಗೋಜಿಕೊಪ್ಪ ಕಣ್ಣೂರು ಹಿರೇಮುನ್ನವಳ್ಳಿ ಹಂಚಿನಾಳ ನೂಲ ಉಳ್ಳಾಗಡ್ಡಿ ಖಾನಾಪುರ ಶ್ರೀಗಳನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮಹಾಪೋಷಕರನ್ನಾಗಿ ಎಂ.ಚಂದ್ರಗಿಯ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಭೂತರಾಮನಹಟ್ಟಿಯ ಶಿವಸಿದ್ಧ ಶಿವಾಚಾರ್ಯ ಸ್ವಾಮೀಜಿ ಅವರನ್ನು, ಹಣಬರಹಟ್ಟಿಯ ಬಸವಲಿಂಗ ಶಿವಾಚಾರ್ಯ ಸ್ವಾಮೀಜಿ, ಕಿಲ್ಲಾತೋರಗಲ್ಲ ಚನ್ನಮಲ್ಲ ಶಿವಾಚಾರ್ಯ ಸ್ವಾಮೀಜಿ, ಉಳ್ಳಾಗಡ್ಡಿ ಖಾನಾಪುರದ ಶ್ರೀ ಸಿದ್ದೇಶ್ವರ ಶಿವಾಚಾರ್ಯರು ಸ್ವಾಮೀಜಿ, ಬಣ್ಣೂರು ಚಿಕ್ಕಮಠದ ಶ್ರೀಗಳನ್ನು ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಗಳನ್ನಾಗಿ ಕಬ್ಬೂರು ರೇವಣ್ಣಸಿದ್ದ ಸ್ವಾಮೀಜಿ, ಸಹಕಾರ್ಯದರ್ಶಿಯಾಗಿ ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಪಾಶ್ಚಾಪುರದ ವಿಶ್ವಾರಾಧ್ಯ ಶಿವಾಚಾರ್ಯ, ಬಿಚ್ಚಗುಪ್ಪಿಯ ಶಿವಯೋಗಿ ಶಿವಾಚಾರ್ಯರು ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಯಿತು.

ಖಜಾಂಚಿಯಾಗಿ ಮಮದಾಪುರ ಚರಮೂರ್ತಿಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಯಿತು. ಬೆಳಗಾವಿ ಜಿಲ್ಲೆಯ ಸುಮಾರು ೪೦ ಶಿವಾಚಾರ್ಯರನ್ನು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

WhatsApp Group Join Now
Telegram Group Join Now
Share This Article