ಬೆಂಗಳೂರು: ರಾಜ್ಯಾದ್ಯಂತ ಆ.27ರಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಇಲಾಖೆ, ಸೆ.1ರ ವರೆಗೂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕ್ಯಾಸಲ್ ರಾಕ್, ಕದ್ರಾದಲ್ಲಿ ಸೋಮವಾರ ಮಳೆಯಾಗಿದ್ದು, ಉಳಿದೆಡೆ ಒಣಹವೆ ಇತ್ತು. ಬೆಂಗಳೂರಲ್ಲಿ ಹೇಗಿದೆ ವಾತಾವರಣ?: ಬೆಂಗಳೂರು ನಗರದಲ್ಲಿಂದು 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದರೆ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇದೆ. ಹೆಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇರಲಿದ್ದು, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.