ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಮಾಜಿ ಸಚಿವ ಹಾಗೂ ಹಿರಿಯ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕ ಸೌರಭ್ ಭಾರದ್ವಾಜ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಸೌರಭ್ ಭಾರದ್ವಾಜ್ಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಎಎಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಸೌರಭ್ ಭಾರದ್ವಾಜ್ ಭಾಗಿಯಾಗಿದ್ದಾರೆ ಎಂದು ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಪ ಮಾಡಿದ್ದರು.
ಮೂಲಗಳ ಪ್ರಕಾರ, ದೆಹಲಿ ಆಸ್ಪತ್ರೆ ನಿರ್ಮಾಣದ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ದೆಹಲಿ-ಎನ್ಸಿಆರ್ನ 13 ಸ್ಥಳಗಳಲ್ಲಿ ಇ.ಡಿ. ಶೋಧ ನಡೆಸುತ್ತಿದೆ.
ಜಿಎನ್ಸಿಟಿಡಿ ಆರೋಗ್ಯ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಸೌರಭ್ ಭಾರದ್ವಾಜ್, ಮಾಜಿ ಆರೋಗ್ಯ ಸಚಿವರು, ಖಾಸಗಿ ಗುತ್ತಿಗೆದಾರರು ಮತ್ತು ಅಪರಿಚಿತ ಅಧಿಕಾರಿಗಳ ವಿರುದ್ಧ ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿತ್ತು.