ಜೈನ ಧರ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ:ಸಚಿವ ಜಾರಕಿಹೊಳಿ

Ravi Talawar
ಜೈನ ಧರ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ:ಸಚಿವ ಜಾರಕಿಹೊಳಿ
WhatsApp Group Join Now
Telegram Group Join Now

ಜಮಖಂಡಿ; ಜೈನ ಧರ್ಮ, ವ್ಯಾಪಾರ, ಉದ್ಯೋಗ, ಕೃಷಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆಗಳನ್ನು ನೀಡಿದೆ ಎಂದು ಲೋಕೊಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಪೊಲೊ ಮೈದಾನದಲ್ಲಿ ಸೋಮವಾರ ದಕ್ಷಿಣ ಭಾರತ ಜೈನ ಸಭಾ ವೀರಸೇವಾದಳ, ಮಧ್ಯವರ್ತಿ ಸಮಿತಿ ವತಿಯಿಂದ ಏರ್ಪಡಿಸಿದ್ದ ಪ್ರಥಮಾಚಾರ್ಯ ಶಾಂತಿಸಾಗರ ಮಹಾರಾಜರ 70ನೇ ಪುಣ್ಯತಿಥಿ ಕಾರ್ಯಕ್ರಮವನ್ನು ದಿ.ರಾವಸಾಹೇಬ ಅ.ಪಾಟೀಲ ಬೋರಗಾಂವಕರ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಜೈನ ಧರ್ಮ ವಿಶ್ವಕ್ಕೆ ಶಾಂತಿ, ಅಹಿಂಸೆಯನ್ನು ಸಾರುತ್ತ ಸಮಾಜದ ಒಳಿತಿಗೆ ಕಾರ್ಯನಿರ್ವಹಿಸುತ್ತ ಬಂದಿದೆ. ಹೊರರಾಜ್ಯಗಳಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಾ ಬಂದಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೋಜನಾ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ ಮಾತನಾಡಿ ಜೈನ ಧರ್ಮ ಅಹಿಂಸೆಯನ್ನು ಸಾರಿ ಅದರಂತೆ ನಡೆದುಕೊಂಡಿದೆ. ಮಹತ್ಮಾ ಗಾಂಧಿಜಿ ಅವರು ಅಹಿಂಸಾ ಮಾರ್ಗದಿಂದ ಸ್ವತಂತ್ರ ಪಡೆಯಲು ಪ್ರೇರಣೆ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೋತಿ ಬೆಳಗಿಸಿ ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಮಾತನಾಡಿ ಜೈನಧರ್ಮ ದಿಂದ ಪ್ರಕೃರ್ತಿ ಉಳಿದಿದೆ ಅಹಿಂಸೆಯ ಮಾರ್ಗದಿಂದ ಎಲ್ಲ ಪ್ರಾಣಿ ಪಕ್ಷಿಗಳಲ್ಲಿ ದಯೆಯನ್ನು ಧರ್ಮ ಹೇಳಿದೆ. ಜೈನ ಧರ್ಮದ ಐದು ತತ್ವಗಳನ್ನು ಅಳವಡಿಸಿ ಕೊಂಡರೇ ವಿಶ್ವವೇ ಸುಂದರ ತೋಟದಂತೆ ಕಂಗೊಳಿಸುತ್ತದೆ. ಸಾಮಾಜಿಕ ಮೌಲ್ಯಗಳನ್ನು ನೀಡಿದ್ದಲ್ಲದೇ, ಅದರಂತೆ ನಡೆದು ತೊರಿಸಿದೆ ಎಂದು ಹೇಳಿದರು ಜೈನಧರ್ಮಕ್ಕೆ ಪ್ರತ್ಯೆಕ ನಿಗಮ ಮಂಡಲಿ ಸ್ಥಾಪಿಸಲು ಮನವಿ ಸಲ್ಲಿಸಿದ್ದಾರೆ ಸದರಿ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂಧು ಹೇಳಿದರು. ಮಾಜಿ ಸಚಿವ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಜೈನ ಧರ್ಮ ನಸಿಸಿ ಹೋದ ಸಂದರ್ಭದಲ್ಲಿ ಶಾಂತಿಸಾಗರ ಮಹಾರಾಜರು ಪುನರುತ್ಥಾನ ಮಾಡಿದರು. ತತ್ವ ಸಿದ್ಧಾಂತಗಳನ್ನು ಅವುಗಳ ಹಿರಿಮೆ ಯನ್ನು ಸಾರಿದರು. ಕಠಿಣ ತಪಸ್ಸು ಪರಿಶ್ರಮದಿಂದ ಆತ್ಮೋದ್ಧಾರದ ಮಾರ್ಗವನ್ನು ತೋರಿಸಿಕೊಟ್ಟರು ಎಂದು ಹೇಳಿದರು. ಹಿಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಅಥಣಿ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ಜನಿಸಿದ ನಿತ್ಯಾನಂದ ಮುನಿ ಮಹಾರಾಜರು ಹಸ್ತದ ಚಿನ್ಹೆಯನ್ನು ಬಳಸಲು ತಿಳಿಸಿದ್ದರು ಅಂದಿನಿಂದ ಕಾಂಗ್ರೆಸ್‌ನ ಗುರುತು ಹಸ್ತವಾಯಿತು ಎಂದು ನೆನಪಿಸಿಕೊಂಡರು.

ಧರ್ಮಸ್ಥಳದ ವಿಚಾರವಾಗಿ ಸರ್ಕಾರ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡು ಧಾರ್ಮಿಕ ಭಾವನೆಗೆ ಧಕ್ಕೆ ತರುವರ ವಿರುದ್ಧ ಕ್ರಮ ಜರುಗಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಜೈನ ಸಮಾಜದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಹೇಳಿದರು.

ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಿ. ಧರ್ಮಾಧಿಕಾರಿಗಳ ಹೆಸರು ಕೆಡಿಸಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ನಕಲಿ ಯುಟ್ಯೂಬರ್‌ ನನ್ನು ಬಂಧಿಸಬೇಕು, ಅಲ್ಪಸಂಖ್ಯಾತರ ನಿಗಮದಲ್ಲಿ ಮುಸ್ಲಿಂ, ಸಿಖ, ಪಾರಸಿ, ಜೈನ ಹೀಗೆ ಐದು ಸಮುದಾಯಗಳಿದ್ದು ಜೈನಧರ್ಮಕ್ಕೆ ಹೆಚ್ಚಿನ ಅನುದಾನ ಬರುವದಿಲ್ಲ ಆದ್ದರಿಂದ ಪ್ರತ್ಯೇಕ ನಿಗಮ ರಚಿಸಲು ಸರ್ಕಾರ ಮುಂದಾಗಬೇಕು ಎಂದು ಹೇಳಿದರು. ಸಮಾಜ ಒಗ್ಗಟ್ಟಾಬೇಕು ಸಮಾಜದ ವಿರುದ್ಧ ಶಡ್ಯಂತ್ರಗಳು ನಡೆದಾಗ ಧ್ವನಿ ಎತ್ತುವ ಕೆಲಸವಾಬೇಕು, ತುಷ್ಠಿಕರಣದ ರಾಜಕಾರಣ ಇರಬಾರದು ಎಂದು ಅಭಿಪ್ರಾಯ ಪಟ್ಟರು. ಮಾಜಿ ಸಚಿವ ಮುರುಗೇಶ ನಿರಾಣಿ ಮಾತನಾಡಿದರು ವಿಜಯಸೌಹಾರ್ಧ ಬ್ಯಾಂಕ್‌ನ್ನು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆಯವರು ಉದ್ಘಾಟಿಸಿದ್ದರು ಎಂದು ನೆನಪಿಸಿಕೊಂಡೆರು. ಬೀಳಗಿ ಶಾಸಕ ಜೆ.ಟಿ.ಪಾಟೀಲ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ. ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿದರು. ಓಲೆ ಮಠದ ಆನಂದ ದೇವರು ಆಶೀರ್ವಚನ ನೀಡಿದರು.

ನಾಂದಣಿ ಸಂಸ್ಥಾನ ಮಠದ ಜನಸೇನಾ ಭಟ್ಠಾರಕ ಪಟ್ಟಾಚಾರ್ಯರು, ವರೂರು ನವಗ್ರಹತೀರ್ಥದ ಧರ್ಮಸೇನಾ ಭಟ್ಟಾರಕರು. ಸೋಂದಾ ಮಠದ ಭಟ್ಟಾಲಂಕ ಸ್ವಾಮಿಗಳು, ಕೊಲ್ಹಾಪುರದ ಲಕ್ಷ್ಮಿಸೇನಾ ಭಟ್ಟಾರಕ ಸ್ವಾಮಿಗಳು,ಸದಲಗಾ ಶಾಸಕ ಗಣೇಶ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿಶಾಸಕ ಶ್ರೀಕಾಂತ ಕುಲಕರ್ಣಿ, ಜಿ,ಎಸ್‌.ನ್ಯಾಮಗೌಡ, ಬೆಳಗಾವಿ ಶಾಸಕ ಅಭಯ ಪಾಟೀಲ, ಮಾಜಿ ಸಚಿವ ಎಸ್‌.ಆರ್‌.ಪಾಟೀಲ, ನಗರಸಭೆ ಅಧ್ಯಕ್ಷ ಈಶ್ವರ ವಾಳೆಣ್ಣವರ. ಸಹಕಾರ ರತ್ನ ಉತ್ತಮ .ರಾ. ಪಾಟೀಲ, ಬಿ.ಎಸ್‌. ಸಿಂದೂರ, ವೀರ ಸೇವಾದಳ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪಾಟೀಲ, ವಿಜಯ ಪಾಟೀಲ, ಅಭೀನಂದನ ಪಾಟೀಲ, ರಾವಸಾಹೇಬ್‌ ಪಾಟೀಲ, ಜೈನ ಸಮಾಜದ ಮುಖಂಡರು ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು. ಭಾವನಾ ಬೆಳಗಲಿ ಪ್ರಾರ್ಥನೆ ಮಾಡಿದರು, ಬಾಹುಬಲಿ ಉಪಾಧ್ಯೆ ಶಾಂತಿ ಮಂತ್ರ ವಾಚಿಸಿದರು, ಅರುಣ ಕುಮಾರ ಶಹಾ ಸ್ವಾಗತಿಸಿದರು. ಅಜೀತಕುಮಾರ ಭಂಡೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ವರ್ಧಮಾನ ನ್ಯಾಮಗೌಡ ವಂದಿಸಿದರು.

ಮೆರವಣಿಗೆ; ಕಾರ್ಯಕ್ರಮಕ್ಕೆ ಪೂರ್ವದಲ್ಲಿ ಹಳೇಯ ತಹಸೀಲ್ದಾರ ಕಚೇರಿಯಿಂದ ಭವ್ಯವಾದ ಮೆರವಣಿಗೆ ನಡೆಸಲಾಯಿತು. ನೂರಾರು ಜನ ಜೈನ ಸಮಾಜದ ಯುವಕರು ಬೈಕ್‌ರ್ಯಾಲಿ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪೊಲೊ ಮೈದಾನ ತಲುಪಿತು. ಮೈದಾನದಲ್ಲಿ ಧರ್ಮಧ್ವಜವನ್ನು ಹಾರಿಸಿ ನಮನ ಸಲ್ಲಿಸಲಾಯಿತು.

WhatsApp Group Join Now
Telegram Group Join Now
Share This Article