ಬಳ್ಳಾರಿ,ಆ.26. ಜಿಲ್ಲೆಯ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15 ಗೋನಾಳ್ ಮತ್ತು ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಪ್ರಕ್ಷÄಬ್ಧ ವಾತಾವರಣ ನಿರ್ಮಾಣವಾಗಿದ್ದು, ದ್ವೇಷದ ಹಗೆತನವನ್ನು ಯಾವುದಾದರೊಂದು ರೀತಿಯಲ್ಲಿ ತೀರಿಸಿಕೊಳ್ಳಲು ಸಮಯ, ಸಂದರ್ಭಾನುಸಾರ ಕಾಯುತ್ತಿರುತ್ತಾರೆಂದು ಸಂಶಯ ಇದೆ.
ಹಾಗಾಗಿ, ಈ ಗ್ರಾಮಗಳಲ್ಲಿ ಗಣೇಶ ಹಬ್ಬ ಆಚರಣೆ ಮಾಡಿದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಸಂಭವವಿರುವುದರಿAದ ಹಾಗೂ ಮುಂದೆ ನಡೆಯಬಹುದಾದ ಘಟನೆಗಳನ್ನು ತಡೆಹಿಡಿಯುವ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಗ್ರಾಮಗಳಲ್ಲಿ ಪ್ರಸ್ತಕ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ಈ ಸಂಬAಧ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸುವುದು ಹಾಗೂ ಜನಸಂದಣಿ ಸೇರುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.