ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ: ಆರೋಪಿ ಶಾರಿಕ್​ನನ್ನು ತೀವ್ರ ವಿಚಾರಣೆ

Ravi Talawar
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ: ಆರೋಪಿ ಶಾರಿಕ್​ನನ್ನು ತೀವ್ರ ವಿಚಾರಣೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 28: ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಹವಣಿಸಿದ್ದ ಭಯೋತ್ಪಾದಕರಿಗೆ ಫಂಡಿಂಗ್ ಮಾಡಿದ್ದು ಯಾರು‌‌ ಎಂಬುದರ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದೆ. ಭಯೋತ್ಪಾದಕ ಕೃತ್ಯ ಎಸಗುವವರ ಹಣದ ಮೂಲದ ಬಗ್ಗೆ ತನಿಖೆ ಚುರುಕುಗೊಂಡಿದ್ದು, ಕುಕ್ಕರ್ ಬ್ಲಾಸ್ಟ್​ ಪ್ರಕರಣದ ಪ್ರಮುಖ ಆರೋಪಿ ಶಾರಿಕ್​ನನ್ನುಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರುವ ಬಗ್ಗೆ ಇಡಿ ತನಿಖೆ ಮಾಡುತ್ತಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿದೆ.

WhatsApp Group Join Now
Telegram Group Join Now
Share This Article