ಮೈಸೂರು: “ದಸರಾ ಉದ್ಘಾಟಕರ ಆಯ್ಕೆಯು ಭಿನ್ನಾಭಿಪ್ರಾಯಗಳಿಗೆ ಎಡೆಮಾಡಿದ್ದು, ಇದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಚಾಮುಂಡೇಶ್ವರಿ ದೇವಸ್ಥಾನವು ಹಿಂದೂ ಧರ್ಮಕ್ಕೆ ಸೇರಿಲ್ಲ ಎಂಬಂತಹ ಹೇಳಿಕೆಗಳು ಅನಗತ್ಯ” ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮೈಸೂರು ದಸರಾ ಉದ್ಘಾಟಕರ ಆಯ್ಕೆ ವಿಚಾರದ ಕುರಿತಾದ ಹೇಳಿಕೆಗಳಿಗೆ ಬಹಿರಂಗ ಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ.
ರಾಜಮಾತೆ ಪ್ರಮೋದಾದೇವಿ ಒಡೆಯರ್ ಈ ಬಾರಿ ದಸರಾ ಉದ್ಘಾಟಕರ ಆಯ್ಕೆಯ ಬಳಿಕ ಹೊರಬರುತ್ತಿರುವ ರಾಜಕೀಯ ನಾಯಕರ ಹೇಳಿಕೆಗಳು ಈಗ ಚಾಮುಂಡಿ ಬೆಟ್ಟದ ವಿಚಾರವನ್ನು ಆಕ್ರಮಿಸಿಕೊಂಡಿದ್ದು, ಇದು ಬೇಸರ ತಂದಿದೆ ಎಂದು ತಮ್ಮ ಪತ್ರದಲ್ಲಿ ಈ ಸರ್ಕಾರದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.