ಟೀಸರ್ ನಲ್ಲಿ ಸ್ಪಾರ್ಕ್ ಸತ್ಯಕ್ಕಾಗಿ ನಿರಂಜನ್ ಸುಧೀಂದ್ರ ಹೋರಾಟ

Ravi Talawar
ಟೀಸರ್ ನಲ್ಲಿ ಸ್ಪಾರ್ಕ್ ಸತ್ಯಕ್ಕಾಗಿ ನಿರಂಜನ್ ಸುಧೀಂದ್ರ ಹೋರಾಟ
WhatsApp Group Join Now
Telegram Group Join Now
     ರಿಯಲ್‌ ಸ್ಟಾರ್‌ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ  ನಾಯಕನಾಗಿ ನಟಿಸುತ್ತಿರುವ ಸಿನಿಮಾ ‘ಸ್ಪಾರ್ಕ್‌’ . ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ.      ನಿರಂಜನ್  ಪತ್ರಕರ್ತನಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ನೆನಪಿರಲಿ ಪ್ರೇಮ್ ಕಾಣಿಸಿಕೊಂಡಿದ್ದಾರೆ. ಒಂದು ಹಗರಣದ ಸುತ್ತ ಸಾಗುವ ಕಥೆಯನ್ನು ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ. ಸತ್ಯಕ್ಕಾಗಿ ನಿರಂಜನ್ ಹೋರಾಟ ಹೇಗಿದೆ ಅನ್ನೋದನ್ನು ಟೀಸರ್ ನಲ್ಲಿ ತೋರಿಸಲಾಗಿದೆ.
     ಸಮಾರಂಭದಲ್ಲಿ ನಿರಂಜನ್ ಸುಧೀಂದ್ರ ಮಾತನಾಡಿ “ಸ್ಪಾರ್ಕ್’ ಎಲ್ಲರ ಮನಸ್ಸಿನಲ್ಲಿರುವ ಕಿಡಿ. ಏನೇ ಹಗರಣ, ಏನೇ ನಡೆದರು‌ ಮೊದಲು ಧ್ವನಿ ಎತ್ತುವುದು‌ ಪತ್ರಕರ್ತರು. ಅವರಿಗೆ ಸಿಗುವ ಗೌರವ ಹಾಗೂ ಗುರುತಿಸುವಿಗೆ ಮಿಸ್ ಆಗುತ್ತಿದೆ. ನಾನು ಚಿತ್ರದಲ್ಲಿ ಜರ್ನಲಿಸ್ಟ್ ಪಾತ್ರ ನಿರ್ವಹಿಸುತ್ತಿದ್ದೇನೆ. ಇದು ದೊಡ್ಡ ಜವಾಬ್ದಾರಿ. ಇದರಲ್ಲಿ ಬರವಣಿಗೆ ತುಂಬಾ ಸ್ಟ್ರಾಂಗ್ ಆಗಿದೆ. ಇದು ಹಗರಣ ಕಥಾಹಂದರ ಹೊಂದಿರುವ ಚಿತ್ರ. ಕಮರ್ಷಿಯಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ” ಎಂದರು.
    ನೆನಪಿರಲಿ ಪ್ರೇಮ್ “ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸುರಸುಂದರಾಗ ಹೀರೋಗಳು ಇದ್ದಾರೆ. ಅದಕ್ಕೆ ಹೊಸ ಸೇರ್ಪಡೆ ನಿರಂಜನ್. ಗರಿಮ ಮೇಡಂ  ನಿಮಗೆ ಕನ್ನಡದ ಮೇಲೆ ಇರುವ ಅಭಿಮಾನದಿಂದ ಕನ್ನಡ ಚಿತ್ರ ಮಾಡಿದ್ದೀರ. ಧನ್ಯವಾದ. ನಾನು ಇಂಡಸ್ಟ್ರಿಗೆ ಮಾಸ್ ಹೀರೋ ಅಗಬೇಕು ಎಂದು ಬಂದೆ. ಆದರೆ ಬ್ಯಾಕ್ ಟು ಬ್ಯಾಕ್ ಲವ್ ಸ್ಟೋರಿ ಸಿನಿಮಾ ಮಾಡಿ ಅದು ಹಿಟ್ ಆಗಿ ನನ್ನ ಕ್ಲಾಸ್ ಹೀರೋ ಎಂದು ಪ್ರಿಂಟ್ ಹೊಡೆದು ಇಟ್ಟರು. ನನ್ನಲ್ಲಿರುವ ಸ್ಪಾರ್ಕ್ ನೋಡಿ ಮಹಾಂತೇಶ್ ನನಗೆ ಮಾಸ್ ಕ್ಯಾರೆಕ್ಟರ್ ಕೊಟ್ಟಿದ್ದಾರೆ” ಎಂದರು.
     ನಿರ್ದೇಶಕ ಮಹಾಂತೇಶ್ “ಪ್ರೇಮ್ ಸರ್ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಅವರ ಡೆಡಿಕೇಷನ್, ಪಾತ್ರಕ್ಕೆ ತಯಾರಾಗುವ ರೀತಿ ನೋಡಿ ನಾನು ಸ್ಫೂರ್ತಿ ಪಡೆದುಕೊಂಡೆ‌. ನಿರಂಜನ್ ಅವರು ತುಂಬಾ ಹಂಬಲ್ ನಟ. ಸ್ಪಾರ್ಕ್ ಸಿನಿಮಾ ಒಂದು ಸ್ಕ್ಯಾಮ್ ಬಗ್ಗೆ ಹೇಳೋದಿಕ್ಕೆ ಹೊರಟಿರುವ ಚಿತ್ರ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಸಚಿನ್ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ” ಎಂದರು.
     ಚಿತ್ರದಲ್ಲಿ  ನಾಯಕಿಯಾಗಿ ರಚನಾ ಇಂದರ್ ಅಭಿನಯಿಸುತ್ತಿದ್ದಾರೆ. ರಮೇಶ್ ಇಂದಿರಾ, ಧರ್ಮಣ್ಣ ಕಡೂರು, ಸಾಧು ಕೋಕಿಲಾ, ಬಲರಾಜವಾಡಿ, ನರೇಂದ್ರ ಬಾಬು, ಗಣೇಶ್ ರಾವ್ ಇತರರು ತಾರಾಬಳಗದಲ್ಲಿದ್ದಾರೆ.
      ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್‌ ಚಿತ್ರ ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸ್ವಾಮಿ ಜೆ ಗೌಡ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನವಿದೆ.
WhatsApp Group Join Now
Telegram Group Join Now
Share This Article