ಹುಕ್ಕೇರಿ: ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಭಿವೃದ್ಧಿಗಾಗಿ ದಿ. ಅಪ್ಪಣಗೌಡ ಪಾಟೀಲ್ ಅವರ ಪೆನಲ್‌ಗೆ ಚುನಾವಣೆಯಲ್ಲಿ ತಾವೆಲ್ಲ ಬೆಂಬಲ ನೀಡಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ತಾಲೂಕಿನ ಹುಲ್ಲೊಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸರ್ವ ರೈತರಿಗೆ ಒಳ್ಳೆಯ ಸೇವೆ ಒದಗಿಸಬೇಕು ಎಂದು ನಿರ್ಧರಿಸಿ ಅಣ್ಣಾಸಾಬ್ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ನಾವೆಲ್ಲ ಸೇರಿ ಈ ಪೆನಲ್ ಮಾಡಿದ್ದೇವೆ. ಆದ್ದರಿಂದ ಈ ಪೆನಲ್ ಗೆ ಆಶೀರ್ವದಿಸಬೇಕೆಂದು ವಿನಂತಿಸಿದರು.
ಮೂವತ್ತು ವರ್ಷಗಳ ಅವಧಿಯಲ್ಲಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿ ಯಾವ ರೀತಿ ಕಾರ್ಯ ನಿರ್ವಹಿಸಿದೆ, ಇತ್ತಿಚೀನ ಮೂರು ತಿಂಗಳ ಅವಧಿಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಿದೆ ಎಂಬುವುದನ್ನು ತಾವೆಲ್ಲ ಗಮನಿಸಬೇಕು. ಜನ ಸೇವೆ ಮಾಡುವವರನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.
ಇದೇ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ್, ಸಹಕಾರಿ ನಿರ್ದೇಶಕ ರವಿ ಹಿಡಕಲ್, ಹುಕ್ಕೇರಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿಜಯ ರವದಿ, ಬಸು ಮರಡಿ ಸೇರಿದಂತೆ ಹಲವರಿದ್ದರು.
ಈ ಸಂದರ್ಭದಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಜಯಗೌಡ ಪಾಟೀಲ್, ಸಹಕಾರಿ ನಿರ್ದೇಶಕ ರವಿ ಹಿಡಕಲ್, ಹುಕ್ಕೇರಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವಿಜಯ ರವದಿ, ಬಸು ಮರಡಿ ಸೇರಿದಂತೆ ಹಲವರಿದ್ದರು.