ಜೀವನ ನಿರ್ವಹಣೆಗೆ ಅಗತ್ಯ ಕೌಶಲ್ಯಗಳನ್ನು ಕಲಿಸಲು ಕ್ರೀಡೆ ಸಹಾಯಕ : ವೈ. ಜೆ. ಭಜಂತ್ರಿ

Ravi Talawar
ಜೀವನ ನಿರ್ವಹಣೆಗೆ ಅಗತ್ಯ ಕೌಶಲ್ಯಗಳನ್ನು ಕಲಿಸಲು ಕ್ರೀಡೆ ಸಹಾಯಕ : ವೈ. ಜೆ. ಭಜಂತ್ರಿ
WhatsApp Group Join Now
Telegram Group Join Now
ಬೆಳಗಾವಿ: ಕ್ರೀಡೆಯು ಓರ್ವ ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಅತ್ಯಗತ್ಯವಾಗಿ ಬೇಕೆ ಬೇಕು. ಅದು ದೇಹವನ್ನು ಸದೃಢಗೊಳಿಸುವುದಲ್ಲದೇ ಒತ್ತಡ ಕಡಿಮೆ ಮಾಡಿ ಮಾನಸಿಕ ಏಕಾಗ್ರತೆ ಹೆಚ್ಚಿಸುತ್ತದೆ. ಅದಲ್ಲದೇ ಕ್ರೀಡೆ ನಾಯಕತ್ವ, ಶಿಸ್ತು, ತಾಳ್ಮೆ, ಮತ್ತು ಸಮಯ ನಿರ್ವಹಣೆಯಂತಹ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಕಲಿಸುತ್ತದೆ ಎಂದು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಜೆ. ಭಜಂತ್ರಿ ಅಭಿಪ್ರಾಯಪಟ್ಟರು. ಅವರು ಇಂದು ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧರಾಮೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ವಲಯ ಮಟ್ಟದ ಕ್ರೀಡಾಕೂಟ ಹಾಗೂ ರಾಷ್ಟ್ರೀಯ ಕ್ರೀಡಾ ದಿನ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಸೊಲ್ಲಾಪುರದ ಶಿವಬಸವ ದೇವರು ಮಾತನಾಡಿ ಕ್ರೀಡೆಗಳು ಯುವಕರಲ್ಲಿ ಧನಾತ್ಮಕ ಮನೋಭಾವ ಮತ್ತು ಆತ್ಮ ವಿಶ್ವಾಸ ಬೆಳೆಸುವಲ್ಲಿ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಕ್ರೀಡೆಯಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವ ಪ್ರದರ್ಶಿಸಿ ಪರಸ್ಪರ ಸಹಬಾಳ್ವೆಯಿಂದ ಬದುಕಬೇಕು ಎಂದರು.

ವೇದಿಕೆಯ ಮೇಲೆ ನಿವೃತ್ತ ಕಾಲೇಜು ಪ್ರಾಧ್ಯಾಪಕ ಜಿ.ಎನ್. ಪಾಟೀಲ, ಜಿಲ್ಲಾ ಸಂಯೋಜಕ ಪಿ.ಡಿ. ಶಿವನಾಯ್ಕರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಜೆ. ಬಿ. ಪಟೇಲ್, ಕ್ಷೇತ್ರ ಸಮನ್ವಯ ಅಧಿಕಾರಿ ಐ. ಡಿ. ಹಿರೇಮಠ, ಸಂಯೋಜಕ ರಾಜಸೇಖರ ಪಾಟೀಲ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಸಿದ್ದರಾಮೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಚಾರ್ಯೆ ಪೂಜಾ ನಾಯಕ ಸ್ವಾಗತಿಸಿದರು. ಶಿಕ್ಷಕಿ ಸ್ವಾತಿ ಪೂಜಾರ ನಿರೂಪಿಸಿದರು. ಕೊನೆಗೆ  ಫಾತೀಮಾ ಉಸ್ತಾದ್ ವಂದಿಸಿದರು.

WhatsApp Group Join Now
Telegram Group Join Now
Share This Article