ಕ್ರೀಡೆ ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗ: ಕೆ.ಗ್ರೇಸಿ

Ravi Talawar
ಕ್ರೀಡೆ ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗ: ಕೆ.ಗ್ರೇಸಿ
WhatsApp Group Join Now
Telegram Group Join Now
ರಾಷ್ಟಿçÃಯ ಕ್ರೀಡಾ ದಿನ ಅಂಗವಾಗಿ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ

ಬಳ್ಳಾರಿ,ಆ.30.): ದೈನಂದಿನ ಜೀವನದಲ್ಲಿ ಕ್ರೀಡೆಗಳು ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗವಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟಿçÃಯ ಕ್ರೀಡಾ ದಿನ ಅಂಗವಾಗಿ ಶುಕ್ರವಾರ ಆಯೋಜಿಸಲಾಗಿದ್ದ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗಳು ಅತ್ಯಾವಶ್ಯಕವಾಗಿದೆ. ಕ್ರೀಡೆಗಳು ನಮ್ಮ ಜೀವನವನ್ನು ಸಮೃದ್ಧಗೊಳಿಸುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಯುವಪೀಳಿಗೆಯು ತಪ್ಪದೇ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು.
ಭಾರತದ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಕೊಡುಗೆ ಗುರುತಿಸಲು ಆ.29 ರಂದು ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದ ಅವರು, ಧ್ಯಾನ್ ಚಂದ್ ಅವರು ಹಲವು ಪೀಳಿಗೆಯವರಿಗೆ ಪ್ರೇರಣೆಯಾಗಿದ್ದವರು ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಟಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು.
ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆನ್ ಲೈನ್ ಮೂಲಕ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಳಿಕ ವಿವಿಧ ಕ್ರೀಡೆಗಳು ಜರುಗಿದವು.
ಈ ವೇಳೆ ಹಾಕಿ ತರಬೇತುದಾರ ಜಾಕೀರ್, ಫುಟ್ ಬಾಲ್ ತರಬೇತುದಾರ ಮಸೂರ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಸಿದ್ದು, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಕಾರ್ಯದರ್ಶಿ ಬುಜ್ಜಿ, ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಬಳ್ಳಾರಿ  ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳು, ಸಾರ್ವಜನಿಕರು ಹಾಗೂ ಇತರರು ಭಾಗವಹಿಸಿದ್ದರು.
WhatsApp Group Join Now
Telegram Group Join Now
Share This Article