ಯಾದಗಿರಿ, ಆಗಸ್ಟ್ 30: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ (arrest). ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದ ಎಂದು ತಿಳಿದುಬಂದಿದೆ.