ರಸ್ತೆ ಅಗಲೀಕರಣ, ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭ; ಶಾಸಕ ನಾರಾ ಭರತ್ ರೆಡ್ಡಿ ಭೇಟಿ, ಪರಿಶೀಲನೆ

Ravi Talawar
ರಸ್ತೆ ಅಗಲೀಕರಣ, ಮಾರುಕಟ್ಟೆ ನಿರ್ಮಾಣ ಕಾಮಗಾರಿ ಆರಂಭ; ಶಾಸಕ ನಾರಾ ಭರತ್ ರೆಡ್ಡಿ ಭೇಟಿ, ಪರಿಶೀಲನೆ
WhatsApp Group Join Now
Telegram Group Join Now
ಬಳ್ಳಾರಿ, ಆ.30.. ಗಡಿಗಿ ಚನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್’ವರೆಗಿನ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಶುಕ್ರವಾರ ಆರಂಭಗೊಂಡಿತು. ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು.
ಗಾಂಧಿ ಭವನದ ಎದುರಿಗೆ ಉದ್ಧೇಶಿತ ಹೂ-ಹಣ್ಣು ಬೀದಿ ಬದಿ ವ್ಯಾಪಾರಿಗಳ ಮಾರುಕಟ್ಟೆ ನಿರ್ಮಾಣ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದ ಶಾಸಕ ನಾರಾ ಭರತ್ ರೆಡ್ಡಿ ಕಾಮಗಾರಿ ವಿಳಂಬ ಆಗದಂತೆ ಕೆಲಸ ಮಾಡಬೇಕೆಂದು ಸೂಚಿಸಿದರು.
ಈ ಸಂದರ್ಭ ಪಾಲಿಕೆಯ ಮಾಜಿ ಮೇಯರ್ ಎಂ.ರಾಜೇಶ್ವರಿ, ಸದಸ್ಯರಾದ ಪ್ರಭಂಜನಕುಮಾರ್, ಪಿ.ಗಾದೆಪ್ಪ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ನಾಗಲಕೆರೆ ಗೋವಿಂದ, ಸೋಮಪ್ಪ, ಮಡಿವಾಳಪ್ಪ, ಲೋಕೋಪಯೋಗಿ ಇಲಾಖೆಯ ಇಇ ಹೇಮರಾಜ್, ಎಇಇ ಬಸರೆಡ್ಡಿ, ಮಹಾನಗರ ಪಾಲಿಕೆಯ ನೂತನ ಆಯುಕ್ತ ಮಂಜುನಾಥ್ ಹಾಗೂ ಪಾಲಿಕೆಯ ಹಲವು ಜನ ಎಂಜಿನಿಯರ್’ಗಳು, ಗುತ್ತಿಗೆದಾರರು ಹಾಜರಿದ್ದರು
WhatsApp Group Join Now
Telegram Group Join Now
Share This Article