ಟಿಯಾಂಜಿನ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ ಸಂಘರ್ಷ ಸೇರಿದಂತೆ ಪ್ರಮುಖ ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಹಾಗೇ, ಪ್ರಧಾನಿ ಮೋದಿ ಮತ್ತು ಪುಟಿನ್ ತಮ್ಮ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಭಾರತ-ರಷ್ಯಾ ಪಾಲುದಾರಿಕೆಯನ್ನು ಪುನರುಚ್ಚರಿಸಿದರು.
ರಷ್ಯಾ ಮತ್ತು ಉಕ್ರೇನ್ ಶಾಂತಿ ಅನುಸರಿಸಬೇಕಿದೆ: ಪುಟಿನ್ ಮೋದಿ ದ್ವಿಪಕ್ಷೀಯ ಸಭೆಯಲ್ಲಿ ಮೋದಿ ಮಾತು

ಉಕ್ರೇನ್ ಬಿಕ್ಕಟ್ಟಿನ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ನಾವು ಉಕ್ರೇನ್ ಬಗ್ಗೆ ಚರ್ಚಿಸುತ್ತಿದ್ದೇವೆ. ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ” ಎಂದು ಹೇಳಿದ್ದಾರೆ.