ಸೆ.04 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಸಮಾರಂಭ

Ravi Talawar
ಸೆ.04 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಸಮಾರಂಭ
WhatsApp Group Join Now
Telegram Group Join Now


ಬಳ್ಳಾರಿ,ಸೆ.02 ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 13 ನೇ ವಾರ್ಷಿಕ ಘಟಿಕೋತ್ಸವವು ಸೆ.04 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮAದಿರದಲ್ಲಿ ಜರುಗಲಿದೆ.
ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು.
ನವದೆಹಲಿಯ ಇಂಟರ್ ಯುನಿವರ್ಸಿಟಿ ಎಕ್ಸಲರೇಟರ್ ನ ನಿರ್ದೇಶಕರಾದ ಪ್ರೊ.ಅವಿನಾಶ್ ಚಂದ್ರ ಪಾಂಡೆ ಅವರು ಘಟಿಕೋತ್ಸವ ಭಾಷಣ ಮಾಡುವರು.
ಸಮಾರಂಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ.ಎಂ.ಮುನಿರಾಜು, ಕುಲಸಚಿವರಾದ ನಾಗರಾಜು.ಸಿ ಹಾಗೂ ಕುಲಸಚಿವರಾದ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರುವರು ಎಂದು ವಿವಿ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
Share This Article