ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಮೊದಲ ಆರೋಪಿಯಾಗಿರುವ ಹೈದರಬಾದ್ ಮೂಲದ ಸಿವಿಲ್ ಗುತ್ತಿಗೆದಾರ ಜಿ. ಸತ್ಯನಾರಾಯಣ ವರ್ಮಾ ಎಂಬುವರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತ ಸೆಷನ್ಸ್ ನ್ಯಾಯಾಲಯದ (ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸ್ಥಾಪನೆಗೊಂಡ ವಿಶೇಷ ನ್ಯಾಯಾಲಯ) ಇಡೀ ವಿಚಾರಣಾ ಪ್ರಕ್ರಿಯೆ ರದ್ದು ಪಡಿಸಬೇಕು ಎಂದು ಕೋರಿ ಸತ್ಯನಾರಾಯಣ ವರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ನಿರಾಕರಿಸಿದೆ.