ED ಧರ್ಮಸ್ಥಳ ಕೇಸ್‌ನಲ್ಲಿ ಅಧಿಕೃತವಾಗಿ ಪ್ರವೇಶ

Ravi Talawar
ED ಧರ್ಮಸ್ಥಳ ಕೇಸ್‌ನಲ್ಲಿ ಅಧಿಕೃತವಾಗಿ ಪ್ರವೇಶ
WhatsApp Group Join Now
Telegram Group Join Now

ಬೆಂಗಳೂರು/ಮಂಗಳೂರು, (ಸೆಪ್ಟೆಂಬರ್ 01): ಧರ್ಮಸ್ಥಳ ಪ್ರಕರಣಕ್ಕೆ   ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿದೆರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ಸಿಬಿಐ ಅಥವಾ ಎನ್‍ಐಎ ಸಂಸ್ಥೆಯಿಂದ ತನಿಖೆ ನಡೆಸಿದರೆ ಮಾತ್ರ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.  ಮತ್ತೊಂದೆಡೆ ರಾಜ್ಯ ಸರ್ಕಾರ ಎಸ್​ಐಟಿ ತನಿಖೆ ಸಾಕು ಎನ್ನುತ್ತಿದೆ. ಈ  ಎಲ್ಲಾ ಬೆಳವಣಿಗೆಗಳ ನಡುವೆ ಈ ಪ್ರಕರಣದಲ್ಲಿ  ಜಾರಿ ನಿರ್ದೇಶನಾಲಯ  ತನಿಖೆಗೆ ಎಂಟ್ರಿಯಾಗಿದೆ. ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ ಅನುಮಾನ ಹಿನ್ನೆಲೆಯಲ್ಲಿ ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ ಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ. ಹೀಗಾಗಿ ಕೆಲ ಅಕೌಂಟ್ ಗಳ ಮಾಹಿತಿ ನೀಡುವಂತೆ ಬ್ಯಾಂಕ್​​ಗೆ ಇಡಿ  ಪತ್ರದ ಮೂಲಕ ಮನವಿ ಮಾಡಿದೆ.

WhatsApp Group Join Now
Telegram Group Join Now
Share This Article