ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ.
ಸ್ಯಾಂಡಲ್ವುಡ್ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ಅವರು ಶಿವರಾಜ್ಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಸ್ಟಾರ್ ನಟರ ಜೊತೆ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ ಹೆಸರು ಮಾಡಿದೆ. ಟಾಕ್ಸಿಕ್, ಕೆಡಿ, ಜನ ನಾಯಗನ್ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಕೆವಿಎನ್ ಮೊದಲ ಬಾರಿಗೆ ಶಿವರಾಜ್ ಕುಮಾರ್ ಜೊತೆಯಾಗಿದೆ.
ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ವೆಂಕಟ್ ಕೊನಂಕಿ ಅವರ ಕೆವಿಎನ್ ಸಂಸ್ಥೆ ಹಾಗೂ ಒಡೆಯರ್ ಮೂವೀಸ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಲಿದೆ.
ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ತಾರಾ ಬಳಗದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿಯಂತಹ ದಿಗ್ಗಜರ ಜೊತೆ ಸಂಜನಾ ಆನಂದ್ ಹಾಗೂ ದೀಕ್ಷಿತ್ ಶೆಟ್ಟಿಯಂತ ಪ್ರತಿಭಾನ್ವಿತ ಕಲಾವಿದರದಂಡು ಚಿತ್ರದಲ್ಲಿ ಇರಲಿದೆ.
ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನ ಒದಗಿಸಲಿದ್ದಾರೆ.