ಬೆಳಗಾವಿ ಶ್ರೀ ಬಸವೇಶ್ವರ ಬ್ಯಾಂಕಿನಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ

Ravi Talawar
ಬೆಳಗಾವಿ ಶ್ರೀ ಬಸವೇಶ್ವರ ಬ್ಯಾಂಕಿನಲ್ಲಿ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ
WhatsApp Group Join Now
Telegram Group Join Now

ಬೆಳಗಾವಿ – ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಬೆಳಗಾವಿಯ ರವಿವಾರ ಪೇಟೆಯಲ್ಲಿರುವ ಬೆಳಗಾವಿ ಶ್ರೀ ಬಸವೇಶ್ವರ ಕೋ- ಆಪರೇಟಿವ್ ಬ್ಯಾಂಕಿನಲ್ಲಿ ನಡೆಯಿತು.

ಗ್ರಂಥ ಲೋಕಾರ್ಪಣೆ ಗೊಳಿಸಿದ ಬೆಳಗಾವಿ ಶ್ರೀ ಬಸವೇಶ್ವರ ಕೋ- ಆಪರೇಟಿವ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಎಸ್. ಎಸ್. ವಾಲಿ ಅವರು ಮಾತನಾಡಿ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಬಸವಣ್ಣನವರ ಜನನ, ಕಪ್ಪಡಿ ಸಂಗಮದಲ್ಲಿ ಬಸವಣ್ಣನವರ ವಿದ್ಯಾಭ್ಯಾಸ, ಕಾಯಕ ಜೀವನ, ಕಲ್ಯಾಣದಲ್ಲಿ ಬಸವಣ್ಣನವರ ಸಾಧನೆಗಳು, ಬಸವ ಮಹಾಮನೆ, ಪ್ರಸಾದ- ದಾಸೋಹ, ಅನುಭವ ಮಂಟಪದ ಸ್ಥಾಪನೆ, ಬಸವ ಪೂರ್ವದ ಪರಿಸ್ಥಿತಿ ಹಾಗೂ ನಂತರದ ಸಾಮಾಜಿಕ, ಆರ್ಥಿಕ, ಸಾಹಿತ್ಯಕ, ಶೈಕ್ಷಣಿಕ ಪರಿಸ್ಥಿತಿ ವಿವರದೊಡನೆ ಬಸವಣ್ಣನವರ ಘನ ವ್ಯಕ್ತಿತ್ವ ಹಾಗೂ ಜೀವನದ ಘಟನೆಗಳನ್ನು ಒಳಗೊಂಡು ಜನರಿಗೆ ಒಳ್ಳೆಯ ಸಂದೇಶಗಳನ್ನು ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದ ಕವಿ, ಬರಹಗಾರ, ನಾಟ್ಯ ನಿರ್ದೇಶಕ ಹಾಗೂ ಸಾಮಾಜಿಕ ಕಾರ್ಯಕರ್ತ ಯಶವಂತ ಭರಮಣ್ಣ ಉಚಗಾಂವಕರ
ಅವರು ಮಾತನಾಡಿ ಸಕಲ ಜೀವಾತ್ಮರಿಗೆ ಲೇಸನೆ ಬಯಸಿದ ಮಹಾನ್ ಮಾನವತಾವಾದಿ, ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸಿದ ವಿಶ್ವದ ಯುಗಪುರುಷ ಬಸವಣ್ಣನವರು ಮಹಾ ಮಾನವತಾವಾದಿ, ಸ್ವತಂತ್ರ ವಿಚಾರವಾದಿ, ಸಮತಾವಾದಿ, ದಲಿತೋದ್ಧಾರಕ, ಶ್ರೇಷ್ಠ ಅರ್ಥಶಾಸ್ತ್ರಜ್ಞ, ಸ್ತ್ರೀಕುಲೋದ್ಧಾರಕ, ಪ್ರಾಮಾಣಿಕ ಬದುಕಿನ ಪಾರದರ್ಶಕ ವ್ಯಕ್ತಿತ್ವದ ಮಹಾನ್ ದಾರ್ಶನಿಕರಾಗಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ಇಂತಹ ಕಲ್ಪನೆ ಬಿತ್ತುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನದ ಹಿರಿಯ ಪತ್ರಕರ್ತ ಬಿ. ಎಚ್. ಹೊಂಗಲ ಅವರು ಮಾತನಾಡಿ ಬಸವ ಸಮಿತಿಯು ಈಗಾಗಲೇ 50 ಭಾಷೆಗಳಲ್ಲಿ ವಚನಗಳನ್ನು ಭಾಷಾಂತರಿಸಿದೆ. ಶಾಲೆಯಿಂದ ಶಾಲೆಗೆ, ಕಾಲೇಜಿನಿಂದ ಕಾಲೇಜಿಗೆ, ವಚನಕಾರರು ಮತ್ತು ವ್ಯಕ್ತಿತ್ವ ಕಾರ್ಯಕ್ರಮವನ್ನು ಹಮ್ಮಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನವಾಗಿದೆ ಎಂದು ಹೇಳಿದರು.
ಕೇಂದ್ರ ಬಸವ ಸಮಿತಿಯ ಹಿರಿಯ ನಿರ್ದೇಶಕರು, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ ಅವರು ಸ್ವಾಗತಿಸಿ, ಪ್ರಾಸಾವಿಕವಾಗಿ ಮಾತನಾಡಿದರು. ಬಸವ ಅಭಿಮಾನಿ ಮಹೇಶ ಯಶವಂತ ಉಚಗಾಂವಕರ ವಂದಿಸಿದರು. ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article