ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್; 5 ದಿನಗಳಿಗೆ ವಿಸ್ತರಿಸಿದ ಸರ್ಕಾರ

Ravi Talawar
ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್; 5 ದಿನಗಳಿಗೆ ವಿಸ್ತರಿಸಿದ ಸರ್ಕಾರ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯ ಸರ್ಕಾರವು  ಸರ್ಕಾರಿ ಶಾಲಾ ಮಕ್ಕಳಿಗೆ  ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ರಾಗಿ ಮಾಲ್ಟ್ (Ragi Malt) ವಿತರಣೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ ಈ ವಿಚಾರ ತಿಳಿಸಿದರು.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ.

ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article