ವಾಷಿಂಗ್ಟನ್, ಸೆಪ್ಟೆಂಬರ್ 6: ಕರಾಳ ಚೀನಾಕ್ಕಾಗಿ ಅಮೆರಿಕವು ಭಾರತ ಮತ್ತು ರಷ್ಯಾವನ್ನು ಕಳೆದುಕೊಂಡಂತೆ ಭಾಸವಾಗುತ್ತಿದೆ ಎಂದು ಹೇಳಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅದಾದ ಕೆಲವೇ ಕ್ಷಣಗಳಲ್ಲಿ ವರಸೆ ಬದಲಿಸಿದ್ದಾರೆ. ಭಾರತ (India) ಮತ್ತು ಅಮೆರಿಕದ ಬಾಂಧವ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ. ಭಾರತ ಮತ್ತು ರಷ್ಯಾವನ್ನು ನಾವು ಕಳೆದುಕೊಂಡೆವು ಎಂದು ಸಾಮಾಜಿಕ ಮಾಧ್ಯಮ ಟ್ರೂತ್‌ನಲ್ಲಿ ಅವರು ಸಂದೇಶ ಪ್ರಕಟಿಸಿದ್ದರು. ಇದಾದ ಕೆಲವು ಹೊತ್ತಿನ ನಂತರ ಶ್ವೇತ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಭಾರತವನ್ನು ಕಳೆದುಕೊಂಡಿದ್ದೇವೆ ಎಂದು ನನಗೆ ಅನಿಸುವುದಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿಸುತ್ತಿರುವುದರಿಂದ ನನಗೆ ಹತಾಶೆಯಾಗಿದೆ. ಅದಕ್ಕಾಗಿ ಅವರ ಮೇಲೆ ದೊಡ್ಡ ಪ್ರಮಾಣದಲ್ಲಿ, ಶೇಕಡ 50ರ ತೆರಿಗೆ ವಿರೋಧಿಸಿದ್ದೇನೆ ಎಂದು ಹೇಳಿದ್ದಾರೆ.
ಈ ಮೂಲಕ ಟ್ರಂಪ್ ಇದೀಗ ಭಾರತದ ಕುರಿತ ಹೇಳಿಕೆಗಳ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದಂತೆ ಕಾಣಿಸುತ್ತಿದೆ. ಏತನ್ಮಧ್ಯೆ, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಅಮೆರಿಕದ ಆಗ್ರಹವನ್ನು ಭಾರತ ತಿರಸ್ಕರಿಸಿದೆ.