ಕಾಂಗ್ರೆಸ್‌ನವರು ರಿಸೈನ್‌ ಮಾಡಿ ತಾಕತ್ತಿದ್ದರೆ ಮತ್ತೇ ಚುನಾವಣೆ ಎದುರಿಸಲಿ : ಬಿಜೆಪಿ ಸವಾಲ್‌

Ravi Talawar
ಕಾಂಗ್ರೆಸ್‌ನವರು ರಿಸೈನ್‌ ಮಾಡಿ ತಾಕತ್ತಿದ್ದರೆ ಮತ್ತೇ ಚುನಾವಣೆ ಎದುರಿಸಲಿ : ಬಿಜೆಪಿ ಸವಾಲ್‌
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 6: ಇವಿಎಂ ಯಂತ್ರಗಳ  ವಿರುದ್ಧ ಅಪಸ್ವರ, ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿ ರಾಹುಲ್ ಗಾಂಧಿ ಅಭಿಯಾನ ಕೈಗೊಂಡಿದ್ದಾರೆ. ಇದೀಗ ತಮ್ಮ ನಾಯಕನ ಹೋರಾಟಕ್ಕೆ ಬಲ ತುಂಬಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಮಹಾನಗರ ಪಾಲಿಕೆಗಳು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ನಗರಸಭೆ, ಪುರಸಭೆ ಹೀಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಮತಯಂತ್ರ ಬಳಕೆಗೆ ಕೊಕ್ ಕೊಟ್ಟು, ಹಳೆ ಪದ್ಧತಿಯಂತೆ ಬ್ಯಾಲೆಟ್‌ ಪೇಪರ್, ಅಂದರೆ ಮತಪತ್ರ ಬಳಕೆ ನಿರ್ಧರಿಸಿದೆ. ಗುರುವಾರ ನಡೆದಚ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯಕೈಗೊಂಡಿದೆ. ಅಲ್ಲದೆ, ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಗೊಳಿಸುವುದು, ಪರಿಷ್ಕರಣೆ ಮಾಡುವ ಅಧಿಕಾರವನ್ನೂ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದೆ. ಈ ಎಲ್ಲಾ ನಿರ್ಣಯಗಳನ್ನು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಆದರೆ, ಈ ನಿರ್ಧಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಬ್ಯಾಲೆಟ್ ಮೂಲಕ ಮತ್ತೆ ಚುನಾವಣೆ ಎದುರಿಸಿ ಗೆದ್ದು ಬರಲಿ ಎಂದು ಸವಾಲು ಹಾಕಿದ್ದಾರೆ. ಮತ್ತೆ ಮತಪತ್ರದತ್ತ ಮುಖ ಮಾಡುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
Share This Article