ಬಳ್ಳಾರಿ,ಸೆ.೦6.: ನಗರದ ಶ್ರೀಪಂಚಾಕ್ಷರಿ ಮಾರ್ಷಿಯಲ್ ಆರ್ಟ್ಸ್ ಟ್ರಸ್ಟ್ ವತಿಯಿಂದ ಬಾಲಭಾರತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಅತಿಥಿ, ನಿವೃತ್ತ ದೈಹಿಕ ಶಿಕ್ಷಕರು, ರಂಗಕರ್ಮಿ ಕಲ್ಲುಕಂಬ ಶಿವೇಶ್ವರಗೌಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳಿಗೆ ಗೌರವ ಕೊಡುವುದನ್ನು ಕಲಿಯಬೇಕು, ನಿರಂತರ ಪರಿಶ್ರಮದಿಂದ ಗುರುವಿನಲ್ಲಿ ಶ್ರದ್ಧೆ, ಭಕ್ತಿಯಿಂದ ನಡೆದುಕೊಂಡರೆ ಜೀವನದಲ್ಲಿ ಬೇಕಾದನ್ನು ಸಾಧಿಸಬಹುದು.
ವಿದ್ಯಾರ್ಥಿಗಳು ಓದಿನ ಜೊತೆಗೆ ಕರಾಟೆಯಂತ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದೈಹಿಕವಾಗಿ ಹೆಚ್ಚಿನ ಸಾಮರ್ಥವನ್ನು ಗಳಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಬಂಡ್ರಾಳ್ ಮೃತ್ಯುಂಜಯಸ್ವಾಮಿ ಮಾತನಾಡಿ, ಶಿಕ್ಷಕರಿಗೆ ಸದೃಢ ಸಮಾಜವನ್ನು ಕಟ್ಟುವ ಶಕ್ತಿ ಇದೆ. ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಠಿಯಿಂದ ಶಿಕ್ಷಕರ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದ್ದು, ಶಿಕ್ಷಕರು ನಿಸ್ವಾರ್ಥತೆ ಮತ್ತು ತ್ಯಾಗ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕರು, ರಂಗಕರ್ಮಿಗಳು, ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಜಿ.ಶಿವಶಂಕರಗೌಡ, ಕಲ್ಲುಕಂಬರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮ ಪ್ರಾರಂಭದಲ್ಲಿ ಕರಾಟೆ ವಿದ್ಯಾರ್ಥಿಗಳಾದ ಸಮನ್ವಿತ ಮತ್ತು ತಂಡ, ಪಾರ್ಥನೆ ಗೀತೆ ಹಾಡಿದರು. ವಿದ್ಯಾರ್ಥಿಗಳಿಗೆ ಕರಾಟೆ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕೆ.ಅಶೋಕ್, ಅಶೋಕ್ ಚವಾಣ್, ಗಾದಿಲಿಂಗಪ್ಪ ಭಾಗವಹಿಸಿದ್ದರು.