ಚುನಾವಣಾ ಆಮಿಷ ಕುರಿತು ಹೈಕೋರ್ಟ್‌ಗೆ ಅರ್ಜಿ: ಆಕ್ಷೇಪಣೆಗೆ ಸಮಯ ಕೇಳಿದ ಚುನಾವಣಾ ಆಯೋಗ

Ravi Talawar
ಚುನಾವಣಾ ಆಮಿಷ ಕುರಿತು ಹೈಕೋರ್ಟ್‌ಗೆ ಅರ್ಜಿ: ಆಕ್ಷೇಪಣೆಗೆ ಸಮಯ ಕೇಳಿದ ಚುನಾವಣಾ ಆಯೋಗ
WhatsApp Group Join Now
Telegram Group Join Now

ಬೆಂಗಳೂರು, ಏ.1: ವಿಧಾನಸಭೆ ಚುನಾವಣೆ 2023ರ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪ ಸಂಬಂಧ ಚುನಾವಣಾ ಅಕ್ರಮ ತಡೆಗಟ್ಟಲು ನಿರ್ದೇಶನ ಕೋರಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಮತ್ತಿತರರು ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಚುನಾವಣಾ ಆಯೋಗ  ಹೈಕೋರ್ಟ್​ಗೆ ಮನವಿ ಮಾಡಿದೆ. ಅದರಂತೆ, ಎರಡು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿ ಹೈಕೋರ್ಟ್ ಆದೇಶಿಸಿತು.

ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ. ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ. ಕರ್ನಾಟಕ ಮಾಡಲ್ ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಪಿಐಎಲ್ ಸಲ್ಲಿಸಲಾಗಿತ್ತು.

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಮತದಾರರನ್ನು ತಮ್ಮ ಪಕ್ಷದತ್ತ ಸೆಳೆದುಕೊಳ್ಳಲು ವಿಧಾನಸಭೆ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅಲ್ಲದೆ, ಸರ್ಕಾರ ರಚನೆಯಾದ ದಿನವೇ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಭರವಸೆ ನೀಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸಿತ್ತು.

60 ಸಾವಿರ ಗ್ಯಾರಂಟಿ ಕಾರ್ಡ್​ಗಳನ್ನ ಮನೆ ಮನೆಗೆ ಹೋಗಿ ವಿತರಣೆ ಮಾಡಲಾಗಿದೆ. ಕಾರ್ಡ್​ನ್ನ ಎಟಿಎಮ್ ರೀತಿ ಬಳಸಬಹುದು. ಅದರಲ್ಲಿ ಗಿಫ್ಟ್​​ನ್ನ ಖರೀದಿ ಮಾಡಬಹುದು ಎಂದು ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೆ, ಮತದಾನ ಬಳಿಕ ಕಾರ್ಡ್ ಬಳಸಬಹುದೆಂದು ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸ ಆಗಿದೆ. ಮತಕ್ಕೆ ಪ್ರಚಾರ ಆಗಿದ್ದರೇ, ಬಾರ್ ಕೋಡ್ ಯಾಕೆ ಪ್ರಿಂಟ್ ಮಾಡಿದ್ದರು, ಮತದಾರರಿಗೆ ದಾರಿ ತಪ್ಪಿಸುವ ಕೆಲಸ ಆಗಿದೆ ಎನ್ನಲಾಗಿತ್ತು.

 

WhatsApp Group Join Now
Telegram Group Join Now
Share This Article