ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಲಾಠಿಚಾರ್ಜ್‌

Ravi Talawar
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಲಾಠಿಚಾರ್ಜ್‌
WhatsApp Group Join Now
Telegram Group Join Now

ಮಂಡ್ಯ, ಸೆಪ್ಟೆಂಬರ್ 08: ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದಲೇ ಕಲ್ಲು ತೂರಾಟ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಭಟ ಮಾಡಲಾಗುತ್ತಿದೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ಉಂಟಾಗಿದ್ದು, ಈ ವೇಳೆ ಕೆಲ ಕಿಡಿಗೇಡಿಗಳಿಂದಲೂ ಕಲ್ಲು ತೂರಾಟ ಮಾಡಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಸದ್ಯ ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಭುಗಿಲೆದಿದೆ. ಒಂದ್ಕಡೆ ಪೊಲೀಸರ ಜೊತೆಗೆ ವಾಗ್ವಾದ ನಡೆದಿದ್ದರೆ, ಮತ್ತೊಂದು ಕಡೆ ಯುವಕರ ಗುಂಪು ರಸ್ತೆಯಲ್ಲೇ ಕುಳಿತು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮಸೀದಿ ಮುಂದೆ ಡಿಜೆ ಹಾಕಿ ಗಣಪತಿ ಮೆರವಣಿಗೆ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article