ಬಳ್ಳಾರಿ ಸೆ 08. ಬಳ್ಳಾರಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ. ಗೋನಾಳು ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಯೋ ನಿವೃತ್ತಿ ಹೊಂದಿದ ಮಂಜುಳಾ ದೇವಿ.ಡಿ ಅವರಿಗೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಸಂಬಂಧಿಕರು ಸನ್ಮಾನಿಸಿ ಗೌರವಿಸಿದರು.
ಸುದೀರ್ಘವಾಗಿ 35 ವರ್ಷಗಳ ಸೇವೆಯಿಂದ ನಿವೃತ್ತಿ ಹೊಂದಿದ ಶಿಕ್ಷಕಿ ಮಕ್ಕಳಿಗೆ ಪಾಠ ಪ್ರವಚನಗಳನ್ನು ಮಾಡಿ ಆ ವಿದ್ಯಾರ್ಥಿಗಳನ್ನು ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಇಂಜಿನಿಯರ್ ,ವೈದ್ಯರನ್ನಾಗಿ ಮಾಡಿರುವ ಹೆಮ್ಮೆ ಇದೆ ಎಂದು ಅವರು ದೂರವಾಣಿ ಮೂಲಕ ತಿಳಿಸಿದರು. ಈ ಸಮಯದಲ್ಲಿ ಶಾಲೆಯ ಶಿಕ್ಷಕರು, ಸಹೋದ್ಯೋಗಿಗಳು, ಕುಟುಂಬದ ಸದಸ್ಯರು, ಪೋಷಕರು ಇನ್ನಿತರರು ಭಾಗವಹಿಸಿದ್ದರು.