ಬೆಂಗಳೂರು, ಸೆಪ್ಟೆಂಬರ್ 10: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳನ್ನು ಈ ವಂಚಕರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಇಂತಹದ್ದೆ ಒಂದು ಘಟನೆ ನಡೆದಿದೆ. ಮಾಜಿ ಶಾಸಕರೊಬ್ಬರಿಗೆಡಿಜಿಟಲ್ ಅರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ ವಂಚಿಸಿದ್ದಾರೆ.
ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್ನ ಮಾಜಿ ಶಾಸಕ ಗುಂಡಪ್ಪ ವಕೀಲ್ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ ವಂಚಕರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ಸ್ನಲ್ಲಿ ಭಾಗಿಯಾಗಿದ್ದೀರಿ. ನಿಮ್ಮ ಎಟಿಎಂ ಕಾರ್ಡ್ಗಳು ಸಿಕ್ಕಿದ್ದು, ಸಾಕಷ್ಟು ವ್ಯವಹಾರ ನಡೆದಿದೆ ಎಂದು ಡಿಜಿಟಲ್ ಅರೆಸ್ಟ್ ನಾಟಕವಾಡಿದ್ದಾರೆ.