ಚಾಮುಂಡಿ ಬೆಟ್ಟದ ಸುತ್ತ ಚಿರತೆ ಓಡಾಟ; ಸಾರ್ವಜನಿಕರಿಗೆ ಎಚ್ಚರಿಕೆ

Ravi Talawar
ಚಾಮುಂಡಿ ಬೆಟ್ಟದ ಸುತ್ತ ಚಿರತೆ ಓಡಾಟ; ಸಾರ್ವಜನಿಕರಿಗೆ ಎಚ್ಚರಿಕೆ
WhatsApp Group Join Now
Telegram Group Join Now

ಮೈಸೂರು: ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಚಾಮುಂಡಿ ಬೆಟ್ಟದ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚಿರತೆಯ ಸಂಚಾರವನ್ನು ಪತ್ತೆ ಹಚ್ಚಲು ರಾತ್ರಿ ಗಸ್ತು ಕಾರ್ಯ ನಿರ್ವಹಿಸಲಾಗುತ್ತಿದೆ. ಯಾವುದೇ ಹೊಸ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.

WhatsApp Group Join Now
Telegram Group Join Now
Share This Article