ಬೆಳಗಾವಿ, ಏ.೦೨: ಚುನಾವಣಾ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಅನಧಿಕೃತ ಹಣ, ವಸ್ತು, ಮದ, ಚಿನ್ನ ಇನ್ನಿತರ ಮೌಲ್ಯಯುವ ವಸ್ತುಗಳನ್ನು ಸಾಗಿಸದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಿಕೊಂಡಿದ್ದಾರೆ. ಇದೀಗ ಬೆಳಗಾವಿಯಲ್ಲಿ ಲಕ್ಷಾಂತರ ಹಣ ಸೀಜ್ ಮಾಡಿದ್ದಾರೆ.
ಸೋಮವಾರ ಸಾಯಂಕಾಲ ಚಿಕ್ಕೋಡಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಕರ್ತವ್ಯಲೋಪ ಆಗದಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಎಚ್ಚರಿಕೆ ನೀಡಿದ್ದರು, ಅಲರ್ಟ್ ಆಗಿರುವ ಚುನಾವಣಾ ಅಧಿಕಾರಿಗಳು ಲಕ್ಷ ಲಕ್ಷ ಹಣ ಸೀಜ್ ಮಾಡಿದ್ದಾರೆ.
ಬೆಳಗಾವಿ ಗಡಿಗೆ ಹೊಂದಿಕೊಂಡು ಇರುವ ಬಾಚಿ ಚೆಕ್ ಪೋಸ್ಟ್ ನಲ್ಲಿ ಚುನಾವಾಣಾಧಿಕಾರಿ ಪ್ರಶಾಂತ್ ದೀಕ್ಷಿತ ಅವರ ತಂಡ 6.65 ಲಕ್ಷ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ಅಮೂಲ ವಿದ್ಯಾಧರ ಎಂಬ ವ್ಯಕ್ತಿ ಮಧ್ಯರಾತ್ರಿ 12 ಗಂಟೆ ಸುಮಾರಿಗೆ 6.65 ಲಕ್ಷ ಹಣ ದಾಖಲೆ ಇಲ್ಲದೆ ಸಾಗಿಸುತ್ತಿದ್ದರು, ಬಾಚಿ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಹಣ ಪತ್ತೆ ಆಗಿದೆ ಎಂದು ತಿಳಿದು ಬಂದಿದೆ.