ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ : ಸಿದ್ದರಾಮಯ್ಯ ಒಪ್ಪಿಗೆ

Ravi Talawar
ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ : ಸಿದ್ದರಾಮಯ್ಯ ಒಪ್ಪಿಗೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 11: ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ (grant) ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಬೆಂಗಳೂರು ಶಾಸಕರ ಜೊತೆ ಬುಧವಾರ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.

WhatsApp Group Join Now
Telegram Group Join Now
Share This Article