ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್

Ravi Talawar
ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್
WhatsApp Group Join Now
Telegram Group Join Now

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಔಪಚಾರಿಕ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್​ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಧಾಕೃಷ್ಣನ್​ ಅವರು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಧಿಕೃತವಾಗಿ ಅಲಂಕರಿಸಿದರು.

ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಲವು ಪಕ್ಷಗಳ ಹಿರಿಯ ನಾಯಕರು ಭಾಗಿಯಾಗಿದ್ದರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕರ್ನಾಟಕದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಪಂಜಾಬ್ ಗವರ್ನರ್ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಎನ್​ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್​ ಬುಧವಾರ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಕೂಟದ ಅಭ್ಯರ್ಥಿ ಬಿ ಸುದರ್ಶನ್​ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಸೋಲಿಸಿ, ಆಯ್ಕೆಯಾಗಿದ್ದರು. ಉಪರಾಷ್ಟ್ರಪತಿ ಹುದ್ದೆಗೆ ನಡೆದ ಮತದಾನದಲ್ಲಿ ರಾಧಾಕೃಷ್ಣನ್​ 452 ಮತಗಳನ್ನು ಪಡೆದರೆ, ಎದುರಾಳಿ ಅಭ್ಯರ್ಥಿಯಾಗಿದ್ದ ಸುದರ್ಶನ್​ ರೆಡ್ಡಿ ಅವರು 300 ಮತಗಳನ್ನು ಪಡೆದುಕೊಂಡಿದ್ದರು.

WhatsApp Group Join Now
Telegram Group Join Now
Share This Article