ಮೈಸೂರು, ಸೆಪ್ಟೆಂಬರ್ 12: ಹಿಂದೂ ವಿರೋಧಿ ನೀತಿ ಅನುಸರಿಸುವ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ 2028ರವರೆಗೆ ಅಲ್ಲ 3 ತಿಂಗಳಲ್ಲೇ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಇದೆ. ಭ್ರಷ್ಟಾಚಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಮೂರು ತಿಂಗಳಲ್ಲೇ ನಿಮ್ಮ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.