ಬೆಳಗಾವಿ: ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಲಾವಕಾಶವಿದೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಸ್ಥಾನಕ್ಕೆ ರಾಹುಲ್ ಜಾರಕಿಹೊಳಿ ಸ್ಪರ್ಧಿಸುವ ಕುರಿತು ಇನ್ನು ಯಾವುದೇ ನಿರ್ಧಾರವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಕ್ಕೇರಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕಳೆದೆರೆಡು ದಿನಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ನಾವು ಕಾರಣವಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ನಾವು ಯಾರನ್ನು ಹೈಜಾಕ್ ಮಾಡಿಲ್ಲ. ನೀವು ಯಾರದೋ ಮಾತು ಕೇಳಿ ನಮ್ಮನ್ನು ಪ್ರಶ್ನಿಸಬಾರದು ಎಂದು ಮಾಧ್ಯಮದವರಿಗೆ ತಿಳಿ ಹೇಳಿದರು.
ಪ್ರೊಡ್ಯೂಸರ್, ಡೈರೆಕ್ಟರ್ ಜಿಲ್ಲೆಯಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮಾಡುತ್ತಿದ್ದಾರೆ. ಸಮಯ ಬಂದಾಗ ಅಕ್ಕಾಡಕ್ಕೆ ಇಳಿಯುತ್ತಾರೆ. ಇನ್ನು ಚುನಾವಣೆಗೆ ಕಾಲಾವಕಾಶವಿದೆ ಎಂದರು.