ಹಾಸನ, ಸೆಪ್ಟೆಂಬರ್ 13: ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ವಿದ್ಯಾರ್ಥಿಗಳು ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಜೊತೆಗೆ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.