ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಲ್ಲೋಳಿಯಲ್ಲಿ ಬೃಹತ್ ರಕ್ತದಾನ ಶಿಬಿರ

Ravi Talawar
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಲ್ಲೋಳಿಯಲ್ಲಿ ಬೃಹತ್ ರಕ್ತದಾನ ಶಿಬಿರ
WhatsApp Group Join Now
Telegram Group Join Now
ಮೂಡಲಗಿ: ಸಾಮಾಜಿಕ, ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ, ಮಾಜಿ ಸೈನಿಕರ ಸಂಘ, ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎನ್.ಎಸ್.ಎಸ್ ಘಟಕ ಕಲ್ಲೋಳಿ ಹಾಗೂ ರೋಟರಿ ರಕ್ತ ಭಂಡಾರ ಕೇಂದ್ರ ಗೋಕಾಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಕಲ್ಲೋಳಿ ಪಟ್ಟಣದ ಶ್ರೀ ಸತ್ಯಸಾಯಿ ಮಂದಿರದ ಆವರಣದಲ್ಲಿ ಸೆ.17 ರಂದು ಬೆಳಿಗ್ಗೆ 09.30 ಗಂಟೆಗೆ ಬೃಹತ್ ಐಚ್ಛಿಕ ರಕ್ತದಾನ ಶಿಬಿರ ನಡೆಯಲಿದೆ.
ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡುವರು. ರೋಟರಿ ಸಂಸ್ಥೆ ಅಧ್ಯಕ್ಷ ಗಿರೀಶ ಜಂವರ, ಉಪಾಧ್ಯಕ್ಷ ವಿಜಯ ದುರಾಯಿ, ಕಾರ್ಯದರ್ಶಿ ಬಸವರಾಜ ಹುಳ್ಳೇರ. ರೋಟರಿ ರಕ್ತ ಭಂಡಾರ ಕೇಂದ್ರ ಅಧ್ಯಕ್ಷ ಮಲ್ಲಿಕಾರ್ಜುನ ಕಲ್ಲೋಳಿ, ವೈದ್ಯಾಧಿಕಾರಿ ಬಿ. ಆರ್. ಕಪ್ಪಲಗುದ್ದಿ, ಸಾಯಿ ಸಮಿತಿ ಸದಸ್ಯ ಸುರೇಶ ಕಬ್ಬೂರ, ಶ್ರೀಶೈಲ ತುಪ್ಪದ, ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಲ್ಲೋಳಿ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಯುವಕರು, ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸೇವಾ ಸಂಸ್ಥೆಯ ಅಧ್ಯಕ್ಷ ಪರಪ್ಪ ಗಿರೆಣ್ಣವರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article