ಬೆಂಗಳೂರು, ಸೆಪ್ಟೆಂಬರ್ 15: ವರನಟ ಡಾ. ರಾಜ್ಕುಮಾರ್ ಹಾಗೂ ಅವರ ಕುಟುಂಬದವರ ಬಗ್ಗೆ ಇತ್ತೀಚೆಗೆ ಅವಹೇಳನಕಾರಿ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ವಿನೋದ್ ಶೆಟ್ಟಿ ಎಂಬುವವರು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಜಾಲತಾಣದಲ್ಲಿ ಹೆಸರಾಗುತ್ತೆ ಅಂತಾ ವಿನೋದ್ ಶೆಟ್ಟಿ ನಾಲಗೆ ಹರಿಬಿಟ್ಟಿದ್ದರು ಎನ್ನಲಾಗಿದೆ.
ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ತೆರವು ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ವಾರ್ ಕೂಡ ನಡೆದಿತ್ತು. ಇದೇ ವಿಚಾರವಾಗಿ ವಿನೋದ್ ಶೆಟ್ಟಿ, ವಿಡಿಯೋ ಒಂದನ್ನು ಮಾಡುವ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ವಿಡಿಯೋಗೆ ಅಣ್ಣಾವ್ರ ಅಭಿಮಾನಿಗಳು ಕೆಟ್ಟದಾಗಿ ಮಾತನಾಡಿದ್ದರು ಎನ್ನಲಾಗಿದೆ.