ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಸಿದ್ದರಾಮಯ್ಯಸಿಹಿ ಸುದ್ದಿ ನೀಡಿದ್ದಾರೆ. ಈ ಕುರಿತಂತೆ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಭೂಸ್ವಾದಿನಕ್ಕೆ ಪರಿಹಾರ ಘೋಷಿಸಲಾಗಿದೆ. ತರಿ ನೀರಾವರಿ ಜಮೀನಿಗೆ 40 ಲಕ್ಷ, ಖುಷ್ಕಿ ಜಮೀನಿಗೆ 30 ಲಕ್ಷದಂತೆ ಭೂಮಿ ಖರೀದಿಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟಾರೆ 70 ಸಾವಿರ ಕೋಟಿ ಈ ಯೋಜನೆಗೆ ಬೇಕು. ಪ್ರತಿ ವರ್ಷ 15-20 ಖರ್ಚು ಮಾಡುತ್ತೇವೆ. ಹೇಗೆ ಹಣ ಹೊಂದಿಸಬೇಕು ಎಂಬುದನ್ನ ಸರ್ಕಾರದ ಹಂತದಲ್ಲಿ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.