ಗದಗ,ಏಪ್ರಿಲ್ 2: ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೇಸ್ ಸರಕಾರ ಆಡಳಿತ ಆಡುತ್ತಿದೆ. ಕಾಂಗ್ರೇಸ್ ಸರಕಾರ ಬಂದಾಗಲೆಲ್ಲ ಇಂಥ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ ಎಂದು ಮಹಿಳಾ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷೆರಾದ ನಿರ್ಮಲಾ ಕೊಳ್ಳಿ ತಿಳಿಸಿದ್ದಾರೆ.
ಕಾಂಗ್ರೇಸ್ ಪಕ್ಷದ ಸಚಿವ ಪ್ರೀಯಾಂಕ್ ಖರ್ಗೆ ಯವರು ಹಿಂದೆಯೂ ಮಹಿಳೆಯರು ಸರಕಾರಿ ಕೆಸಲ ಪಡೆಯಲು ಮಂಚ ಹತ್ತಬೇಕು ಎಂದಿದ್ದರು. ಈ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದರು. ಇದೀಗ ಮಹಿಳೆಯರ ತಾಳಿ, ಕಾಲುಂಗರ ತೆಗೆಸುವ ಕಾರ್ಯಕ್ಕೆ ಕೈಹಾಕಿದ್ದಾರೆ. ಇಂಥ ಅವಮಾನಕ್ಕೆ ಮಹಿಳೆಯರು ಭವಿಷ್ಯದಲ್ಲಿ ಕಾಂಗ್ರೇಸ್ ಪಕ್ಷವನ್ನು ತಿರಸ್ಕರಿಸಿ ಸಮರ್ಥ ಉತ್ತರ ಕೊಡಲಿದ್ದಾರೆ ಎಂದರು.
ಹಿಂದು ಧರ್ಮದ ಪ್ರಕಾರ ಮಹಿಳೆಯರಿಗೆ ಮಾಂಗಲ್ಯ ಮತ್ತು ಕಾಲುಂಗುರಗಳು ಅತ್ಯಂತ ಪವಿತ್ರವಾದವು. ಅವುಗಳನ್ನು ಸಾಮಾನ್ಯವಾಗಿ ಮಹಿಳೆಯರು ವೈಧವ್ಯ ಬಂದಾಗ ಮತ್ತು ಸಂಪೂರ್ಣ ದೇಹದ ಸ್ಕ್ಯಾಣಿಂಗ್ ಸಂದರ್ಭದಲ್ಲಿ ಮಾತ್ರ ತೆಗೆಯುತ್ತಾರೆ. ಪರೀಕ್ಷೆ ವೇಳೆ ಮಾಂಗಲ್ಯ ಮತ್ತು ಕಾಲುಂಗುರ ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದೆ. ಕಾಂಗ್ರೇಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ. ಎಂದು ಮಹಿಳಾ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷರಾದ ನಿರ್ಮಲಾ ಕೊಳ್ಳಿ, ಜಯಶ್ರೀ ಉಗಲಾಟದ, ವಂದನಾ ವರ್ಣೇಕರ, ಅಶ್ವೀನಿ ಜಗತಾಪ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.